Thursday, July 23, 2026
Join WhatsApp Group
HomeInformationಉದ್ಯಮ ನಡೆಸಲು ಉಚಿತ ತರಬೇತಿ

ಉದ್ಯಮ ನಡೆಸಲು ಉಚಿತ ತರಬೇತಿ

ಕಾರವಾರ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸುವ ಉದ್ದೇಶದಿಂದ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ (RSETI) ಸಂಸ್ಥೆ ಆಗಸ್ಟ್ ತಿಂಗಳಲ್ಲಿ ಕುರಿ ಸಾಕಾಣಿಕೆ ಹಾಗೂ ಫಾಸ್ಟ್ ಫುಡ್ ಸ್ಟಾಲ್ ಉದ್ಯಮ ಕುರಿತ ಉಚಿತ ತರಬೇತಿ ಆಯೋಜಿಸಿದೆ.

18ರಿಂದ 50 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲು ಅರ್ಜಿ ಸಲ್ಲಿಸಿದವರಿಗೆ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೇರಿದಂತೆ ಸಂಪೂರ್ಣ ಉಚಿತ ಸೌಲಭ್ಯ ಕಲ್ಪಿಸಲಾಗುತ್ತದೆ. ಉದ್ಯಮ ಆರಂಭಿಸಲು ಅಗತ್ಯವಾದ ಕೌಶಲ್ಯಾಭಿವೃದ್ಧಿ, ಸಾಧನಾ ಪ್ರೇರಣೆ, ಉದ್ಯಮಶೀಲತೆ, ಹೊಸ ಉದ್ಯಮ ಸ್ಥಾಪನೆ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶಸ್ವಿ ಉದ್ಯಮಿಗಳ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕ್ ಸಾಲ ಪಡೆಯುವ ವಿಧಾನ, ಸರ್ಕಾರಿ ಯೋಜನೆಗಳು ಹಾಗೂ ಯೋಜನಾ ವರದಿ ತಯಾರಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.

ಆಸಕ್ತರು ತಮ್ಮ ಹೆಸರು ಹಾಗೂ ವಿಳಾಸವನ್ನು ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು. ಅಥವಾ ಜುಲೈ 30ರೊಳಗೆ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 8217236973, 9483485489, 9482188780 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share