Monday, September 7, 2026
Join WhatsApp Group
HomeLocal Newsವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆ ಆರಂಭ

ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆ ಆರಂಭ

ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ಗಳನ್ನು ಸರ್ಕಾರದ ಇ-ಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಮೇ 29ರಿಂದ ವಿತರಿಸುತ್ತಿದ್ದು, ರಾಜ್ಯ ಸರ್ಕಾರದ ಆದೇಶದಂತೆ ಜೂನ್ 12ರಿಂದ ಉಚಿತ ವಿದ್ಯಾರ್ಥಿ ಬಸ್‌ಪಾಸ್‌ಗಳನ್ನು ನೀಡಲಾಗುತ್ತಿದೆ.

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸಲು ತಾತ್ವಿಕ ಅನುಮೋದನೆ ನೀಡಿದೆ.

ಈ ಆದೇಶದ ಅನ್ವಯ ಸಂಸ್ಥೆಯ ವ್ಯಾಪ್ತಿಯ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿ ಪಾಸ್‌ ವಿತರಣೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಶೈಕ್ಷಣಿಕ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸ್‌ನ ಅವಧಿ ಸೇರಿದಂತೆ ಇತರೆ ನಿಯಮಾವಳಿಗಳನ್ನು ಮುಂದುವರಿಸಲಾಗಿದೆ.

ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್‌ ಪಡೆಯಲು ಈ ಹಿಂದಿನಂತೆ ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್ ಮೂಲಕ ಶಾಲೆ, ಕಾಲೇಜು ಅಥವಾ ಇತರೆ ಯಾವುದೇ ಸ್ಥಳದಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಾ.ಕ.ರ.ಸಾ.ಸಂ. ವ್ಯಾಪ್ತಿಯ 82 ಪಾಸ್‌ ವಿತರಣಾ ಕೇಂದ್ರಗಳ ವಿವರಗಳನ್ನು ನಿಗಮದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್‌ಪಾಸ್‌ಗಳು ಯಥಾವತ್ತಾಗಿ ಚಾಲ್ತಿಯಲ್ಲಿರಲಿವೆ. ಅಲ್ಲದೆ, 2026-27ನೇ ಶೈಕ್ಷಣಿಕ ವರ್ಷಕ್ಕೆ ಈಗಾಗಲೇ ಶುಲ್ಕ ಪಾವತಿಸಿ ಬಸ್‌ಪಾಸ್‌ ಪಡೆದಿರುವ ವಿದ್ಯಾರ್ಥಿಗಳಿಗೆ ಪಾವತಿಸಿದ ಸಂಪೂರ್ಣ ಮೊತ್ತವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು. ಈ ಕುರಿತು ಪ್ರತ್ಯೇಕ ಮಾಹಿತಿ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯಗಳಲ್ಲಿ, ವಿಶೇಷವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ವಾಸವಿದ್ದು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಉಚಿತ ಬಸ್‌ಪಾಸ್‌ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share