Friday, July 24, 2026
Join WhatsApp Group
HomeLocal Newsಉಚಿತ ತರಬೇತಿ; ಆಸಕ್ತರು ಅರ್ಜಿ ಸಲ್ಲಿಸಿ

ಉಚಿತ ತರಬೇತಿ; ಆಸಕ್ತರು ಅರ್ಜಿ ಸಲ್ಲಿಸಿ

ಮೊಬೈಲ್ ರಿಪೇರಿ ಹಾಗೂ ಸರ್ವಿಸ್ ತರಬೇತಿ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಲ್ಲಿ 18ರಿಂದ 45 ವರ್ಷದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗಾಗಿ ಮೇ ತಿಂಗಳ ಕೊನೆಯ ವಾರದಿಂದ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಯಾವುದೇ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್: www.rsetihaliyal.org ಹಾಗೂ https://forms.gle/m4pcmpritDevbwug9 ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್‌ಗಳ ಮೂಲಭೂತ ಜ್ಞಾನ, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ರಿಪೇರಿ ದೋಷ ಪತ್ತೆ ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯ ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು.

ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ವಸತಿ ಸೌಕರ್ಯ ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯದ ಮಾರ್ಗದರ್ಶನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8970145354, 9483485489 ನ್ನು ಸಂಪರ್ಕಿಸುವಂತೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ

ಕಾರವಾರ: ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕುರಿತು 31 ದಿನಗಳ ಉಚಿತ ತರಬೇತಿಯನ್ನು ಮೇ. 15ರಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.ಸಂ: 9380162042, 9481506564, 9740982585 ಅನ್ನು ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share