Saturday, May 30, 2026
HomeCrimeಗಾಂಜಾ ಸೇವನೆ ಆರೋಪ: ಯಲ್ಲಾಪುರದಲ್ಲಿ ಮತ್ತೊಂದು ಪ್ರಕರಣ

ಗಾಂಜಾ ಸೇವನೆ ಆರೋಪ: ಯಲ್ಲಾಪುರದಲ್ಲಿ ಮತ್ತೊಂದು ಪ್ರಕರಣ

ಯಲ್ಲಾಪುರ: ತಾಲೂಕಿನ ಕಿರವತ್ತಿ ಗ್ರಾಮದ ಜಯಂತಿನಗರ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ಯುವಕನ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಮ್ಮದ ಹುಸೇನ (18) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನು ಕಿರವತ್ತಿ ಗ್ರಾಮದ ಜಯಂತಿನಗರ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ. 18ರಂದು ಸಂಜೆ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಸ್ಥಿತಿಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share