Monday, September 7, 2026
Join WhatsApp Group
HomeCrimeಗಾಂಜಾ ಸೇವನೆ: ಯಲ್ಲಾಪುರ, ಕುಮಟಾದಲ್ಲಿ ಪ್ರತ್ಯೇಕ ಪ್ರಕರಣ

ಗಾಂಜಾ ಸೇವನೆ: ಯಲ್ಲಾಪುರ, ಕುಮಟಾದಲ್ಲಿ ಪ್ರತ್ಯೇಕ ಪ್ರಕರಣ

ಯಲ್ಲಾಪುರ/ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಯಲ್ಲಾಪುರ ಮತ್ತು ಕುಮಟಾ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮನಗರದ ನಿವಾಸಿ ದೇವೇಂದ್ರ ಮುಕ್ರಿ (25) ಎಂಬಾತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಉದ್ಯಮನಗರದ ಸನ್ನಿಧಿ ಇಂಡಸ್ಟ್ರೀಸ್ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಹಾವೀರ ಕಾಂಬಳೆ ದೂರು ದಾಖಲಿಸಿದ್ದಾರೆ.

ಇನ್ನೊಂದೆಡೆ ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನತಾ ಪ್ಲಾಟ್ ಮಾಸೂರು ಕ್ರಾಸ್ ನಿವಾಸಿ ಗಣೇಶ ನಾಯ್ಕ (26) ವಿರುದ್ಧವೂ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರಗಿ ಸಮೀಪದ ಹಳಕಾರ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವೇಳೆ ಆತ ಪೊಲೀಸರ ಗಮನಕ್ಕೆ ಬಂದಿದ್ದಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಕುಮಟಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಖಾದರ್ ಬಾಷಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share