Friday, July 24, 2026
Join WhatsApp Group
HomeLocal Newsಗ್ರಾಮ ಒನ್ ಪ್ರಾಂಚೈಸಿಗಳಿಗೆ ಅರ್ಜಿ ಆಹ್ವಾನ

ಗ್ರಾಮ ಒನ್ ಪ್ರಾಂಚೈಸಿಗಳಿಗೆ ಅರ್ಜಿ ಆಹ್ವಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 25 ಗ್ರಾಮ ಪಂಚಾಯತ್‌ಗಳಲ್ಲಿ ಹೊಸದಾಗಿ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ನಾಗರಿಕ ಸೇವೆಗಳನ್ನು ಗ್ರಾಮ ಮಟ್ಟದಲ್ಲೇ ಒದಗಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಅಂಕೋಲಾ, ಭಟ್ಕಳ, ದಾಂಡೇಲಿ, ಹೊನ್ನಾವರ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಸೂಪಾ ಹಾಗೂ ಯಲ್ಲಾಪುರ ತಾಲೂಕುಗಳ ಆಯ್ದ ಗ್ರಾಮ ಪಂಚಾಯತ್‌ಗಳಲ್ಲಿ ಕೇಂದ್ರ ಸ್ಥಾಪಿಸಲಾಗುತ್ತಿದೆ.

ಅಂಕೋಲಾ ತಾಲೂಕಿನ ಅಲಗೇರಿ, ಅಗಸೂರ, ಭಟ್ಕಳದ ಕೊಪ್ಪ, ದಾಂಡೇಲಿಯ ಅಲೂರ ಹಾಗೂ ಅಂಬೇವಾಡಿ, ಹೊನ್ನಾವರದ ಕೋಡಣಿ, ಕಾರವಾರದ ಕೆರವಡಿ ಮತ್ತು ಅಸ್ನೋಟಿ, ಕುಮಟಾದ ಬರ್ಗಿ, ಮುಂಡಗೋಡದ ಒಣಿಕೇರಿ, ಸಿದ್ದಾಪುರದ ನೀಲಕುಂದ ಹಾಗೂ ಅಣಲೇಬೈಲ್, ಶಿರಸಿ ತಾಲೂಕಿನ ಮಂಜಗೂಣಿ, ಹುಲೇಕಲ್, ಸುಗಾವಿ, ಸಾಲ್ಕಣಿ, ನೆಗ್ಗು, ಉಂಚಳ್ಳಿ, ಗುಡ್ಡಾಪುರ, ಸೂಪಾ ತಾಲೂಕಿನ ಅಣಶಿ, ಬಾಜರ್ಕುಣಂಗಾ, ಶಿಂಗರಗಾಂವ್, ನಗೋಡಾ, ಉಳವಿ ಹಾಗೂ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲಾಗುತ್ತದೆ.

ಆಸಕ್ತರು ಜುಲೈ 15ರೊಳಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share