Friday, July 24, 2026
Join WhatsApp Group
HomeLocal Newsಹಳಿಯಾಳದ ಶಿವಾಜಿ ಪರಶುರಾಮ್‌ಗೆ ಏಷ್ಯನ್ ಬೆಳ್ಳಿ

ಹಳಿಯಾಳದ ಶಿವಾಜಿ ಪರಶುರಾಮ್‌ಗೆ ಏಷ್ಯನ್ ಬೆಳ್ಳಿ

ಭಾರತಕ್ಕೆ ಕೀರ್ತಿ ತಂದ ಉತ್ತರ ಕನ್ನಡದ ಯುವ ಓಟಗಾರ

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಯುವ ಅಥ್ಲೀಟ್ ಶಿವಾಜಿ ಪರಶುರಾಮ್ ಮಾದಪ್ಪಗೌಡ್ರ ಅವರು ಚೀನಾದ ಓರ್ಡೋಸ್ ನಗರದಲ್ಲಿ ನಡೆಯುತ್ತಿರುವ ಪ್ರಥಮ ಏಷ್ಯನ್ ಅಂಡರ್-23 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 5,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ.

5,000 ಮೀಟರ್ ಫೈನಲ್‌ನಲ್ಲಿ ಶಿವಾಜಿ 14 ನಿಮಿಷ 08.19 ಸೆಕೆಂಡ್ಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನ ಪಡೆದರು. ಜಪಾನ್‌ನ ರೂಯಿ ಸುಜುಕಿ ಚಿನ್ನದ ಪದಕ ಗೆದ್ದರೆ, ಭಾರತದ ಮತ್ತೋರ್ವ ಅಥ್ಲೀಟ್ ವಿನೋದ್ ಸಿಂಗ್ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಹೀಗಾಗಿ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಒಂದೇ ವಿಭಾಗದಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳು ಲಭಿಸಿವೆ.

22 ವರ್ಷದ ಶಿವಾಜಿ ಪರಶುರಾಮ್ ಮಾದಪ್ಪಗೌಡ್ರ ಅವರು ಇತ್ತೀಚಿನ ವರ್ಷಗಳಲ್ಲಿ ಭಾರತದ ಮಧ್ಯ ಹಾಗೂ ದೀರ್ಘದೂರದ ಓಟಗಳಲ್ಲಿ ಭರವಸೆಯ ಅಥ್ಲೀಟ್ ಆಗಿ ಹೊರಹೊಮ್ಮಿದ್ದಾರೆ. ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಅಂತರ್‌ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 5,000 ಮೀಟರ್‌ನಲ್ಲಿ ತಮ್ಮ ವೈಯಕ್ತಿಕ ಶ್ರೇಷ್ಠ 13:57.58 ಸಮಯ ದಾಖಲಿಸಿ ಏಷ್ಯನ್ ಅಂಡರ್-23 ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದರು. ಅವರು ಈ ಹಿಂದೆ ಏಷ್ಯನ್ ಅಂಡರ್-20 ಚಾಂಪಿಯನ್‌ಶಿಪ್‌ನಲ್ಲೂ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಹಳಿಯಾಳದ ಈ ಯುವ ಪ್ರತಿಭೆಯ ಸಾಧನೆಗೆ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share