Friday, July 24, 2026
Join WhatsApp Group
HomeStateತರಗತಿಯಲ್ಲೇ ಹಾರಿಹೋಯ್ತು ಶಿಕ್ಷಕನ ಪ್ರಾಣಪಕ್ಷಿ

ತರಗತಿಯಲ್ಲೇ ಹಾರಿಹೋಯ್ತು ಶಿಕ್ಷಕನ ಪ್ರಾಣಪಕ್ಷಿ

ಹಾಸನ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕೇರಳಾಪುರ ಗ್ರಾಮದ ಸತೀಶ್ (53) ಅವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತದಿಂದ ಅಸುನೀಗಿದ್ದಾರೆ.

ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ಘಟನೆ ಕಂಡ ವಿದ್ಯಾರ್ಥಿಗಳು ಆತಂಕಗೊಂಡು ಸಹ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ತೀವ್ರ ಹೃದಯಾಘಾತದಿಂದಾಗಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರು ಆಘಾತಕ್ಕೊಳಗಾಗಿದ್ದು, ಶಾಲಾ ವಾತಾವರಣದಲ್ಲಿ ಶೋಕದ ಛಾಯೆ ಆವರಿಸಿದೆ. ಸದಾ ಹಸನ್ಮುಖರಾಗಿದ್ದ ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದ ಸತೀಶ್ ಅವರ ನಿಧನ ಸ್ಥಳೀಯ ಸಮುದಾಯಕ್ಕೂ ಭಾರೀ ನಷ್ಟವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share