Saturday, May 30, 2026
HomeLocal Newsಭಾರೀ ಗಾಳಿ-ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಿ

ಭಾರೀ ಗಾಳಿ-ಮಳೆ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಿ

ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೇ 17ರಿಂದ 18ರವರೆಗೆ ಭಾರೀ ಗಾಳಿ, ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಮಿನುಗಾರರು ಈ ಸಮಯದಲ್ಲಿ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.

ಮಳೆಯ ಜೊತೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಕೂಡಾ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸೂಚಿಸಲಾಗಿದೆ.

ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಸಂಖ್ಯೆ 08382-229857, ಮೊಬೈಲ್ ಸಂಖ್ಯೆ 9483511015ನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share