Friday, July 24, 2026
Join WhatsApp Group
HomeLocal Newsಹೆಸ್ಕಾಂ: ನಿಮ್ಮ ಹಣ ನಿಮಗೇ ವಾಪಸ್!

ಹೆಸ್ಕಾಂ: ನಿಮ್ಮ ಹಣ ನಿಮಗೇ ವಾಪಸ್!

ಕಾರವಾರ: ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಹೆಸ್ಕಾಂ, 2024-25ರ ಸಾಲಿನಲ್ಲಿ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಈ ಹಣವನ್ನು ಗ್ರಾಹಕರಿಗೆ ಮರು ಪಾವತಿಸಲಾಗುತ್ತಿದೆ ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್. ಖಾದ್ರಿ ಹೇಳಿದ್ದಾರೆ.

 ವಿದ್ಯುತ್ ಖರೀದಿ, ಪೂರೈಕೆಯನ್ನು ಉತ್ತಮವಾಗಿ ನಿರ್ವಹಿಸಿದ ಪರಿಣಾಮ 2024-2025ರಲ್ಲಿ ಹೆಸ್ಕಾಂ 153.46 ಕೋಟಿ ರೂ. ಉಳಿತಾಯ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಆದೇಶದ ಅನ್ವಯ 2024-25ನೇ ಆರ್ಥಿಕ ವರ್ಷದ ಪ್ರತಿಯೊಬ್ಬ ಗ್ರಾಹಕರಿಗೆ ಮಾತ್ರ 2024-25ನೇ ಸಾಲಿನ ಅವಧಿಯಲ್ಲಿ ಅವರ ನಿಜವಾದ ಬಳಕೆಯನ್ನು ಆಧರಿಸಿ ಪ್ರತಿ ಯೂನಿಟ್‌ಗೆ 10 ಪೈಸೆಯಂತೆ 2026-2027ರಲ್ಲಿ ಪ್ರತಿ ತಿಂಗಳು ಸಮಾನ ಕಂತುಗಳಲ್ಲಿ (12 ಕಂತುಗಳು) ಮರು ಪಾವತಿಸಲಾಗುತ್ತದೆ. ಈ ಮೊತ್ತವನ್ನು ವಿದ್ಯುತ್ ಬಿಲ್‌ನಲ್ಲಿ ಆರ್ಥಿಕ ವರ್ಷ (FY) 25 ಟ್ರೂ ಅಪ್ ಶುಲ್ಕ ಎಂದು ಪ್ರತ್ಯೇಕವಾಗಿ ನಮೂದಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಸದಾ ರೈತರ ಪರ ಕೆಲಸ ಮಾಡುತ್ತಿದ್ದು, ರೈತರಿಗೆ ಹಗಲು ಹೊತ್ತಿನಲ್ಲಿಯೇ ಏಳು ಗಂಟೆಗಳ ಕಾಲ ವಿದ್ಯುತ್ ನೀಡುವ ನಿಟ್ಟಿನಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಗಳ ಹಾಗೂ ಇಂಧನ ಸಚಿವರ ಸಹಕಾರದೊಂದಿಗೆ ಹೆಸ್ಕಾಂ ಜನಪರವಾಗಿ ಕೆಲಸ ಮಾಡುತ್ತಿದೆ. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ನೀಡಲು ನವೀಕೃತ ಶೀಘ್ರ ಸಂಪರ್ಕ ಯೋಜನೆಯನ್ನೂ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share