Monday, September 7, 2026
Join WhatsApp Group
HomeLocal Newsಹೋಂಸ್ಟೇ ನಡೆಸಲು ಪರವಾನಿಗೆ ಕಡ್ಡಾಯ!

ಹೋಂಸ್ಟೇ ನಡೆಸಲು ಪರವಾನಿಗೆ ಕಡ್ಡಾಯ!

ಕಾರವಾರ: ಪ್ರವಾಸೋದ್ಯಮ ಇಲಾಖೆಯ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ, ನಿಯಂತ್ರಣ ಮತ್ತು ಪ್ರವಾಸೋದ್ಯಮ ನೀತಿ 2024-29ರ ಅನ್ವಯ ಹೋಂಸ್ಟೇ ನಡೆಸಲು ಪ್ರವಾಸೋದ್ಯಮ ಇಲಾಖೆಯ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವು ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯ ಅನುಮೋದನೆ ಪಡೆಯದೇ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೋಂಸ್ಟೇಗಳ ನೋಂದಣಿ ಹಾಗೂ ನವೀಕರಣ ಕಡ್ಡಾಯವಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೋಂದಣಿ ಅಥವಾ ನವೀಕರಣ ಮಾಡಿಸದೇ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳನ್ನು ಕಾನೂನುಬಾಹಿರವೆಂದು ಪರಿಗಣಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕಾರವಾರ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ: 08382-221172 ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share