Friday, October 23, 2026
HomeCrimeಹೊನ್ನಾವರ | ಅಬಕಾರಿ ದಾಳಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ, ಓರ್ವ ಪರಾರಿ

ಹೊನ್ನಾವರ | ಅಬಕಾರಿ ದಾಳಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ, ಓರ್ವ ಪರಾರಿ

ಹೊನ್ನಾವರ: ಸಾರ್ವಜನಿಕ ಸ್ಥಳದಲ್ಲಿ ಪರವಾನಗಿ ಇಲ್ಲದೆ ಮದ್ಯ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸಿದ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಹೊನ್ನಾವರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣದಲ್ಲಿ, ಕಲವೆ ಸೊಪ್ಪಿನಹೊಸಳ್ಳಿ ನಿವಾಸಿ, ವೈನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಅನಿಲ್ ಸಾವೇರ್ ಫರ್ನಾಂಡಿಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಆರೋಪಿ ಯಾವುದೇ ಪಾಸ್‌ ಅಥವಾ ಪರ್ಮಿಟ್ ಇಲ್ಲದೆ ವಿವಿಧ ಮಾದರಿಯ ಮದ್ಯದ ಟೆಟ್ರಾ ಪ್ಯಾಕೆಟ್‌ ಹಾಗೂ ಟಿನ್ ಬಾಟಲ್‌ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇಟ್ಟುಕೊಂಡಿದ್ದ ಎನ್ನಲಾಗಿದೆ. ದಾಳಿಯ ವೇಳೆ ಒಟ್ಟು 75 ಮದ್ಯದ ಟೆಟ್ರಾ ಪ್ಯಾಕೆಟ್‌ ಹಾಗೂ ಟಿನ್‌ಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಮೌಲ್ಯ ರೂ.5850 ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರ ದಾಳಿ ವೇಳೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಲಾಗಿದೆ.

ಇದೇ ವೇಳೆ ಹೊನ್ನಾವರ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದ್ದು, ಕರ್ಕಿ ನಡುಚಿಟ್ಟೆ ನಿವಾಸಿ, 30 ವರ್ಷದ ನಿತೀನ ನಾಗರಾಜ ಶೇಟ್ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಇಲ್ಲದೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ. ದಾಳಿಯ ವೇಳೆ ಒಟ್ಟು ರೂ.1030 ಮೌಲ್ಯದ ವಿವಿಧ ಮಾದರಿಯ ಮದ್ಯದ ಟೆಟ್ರಾ ಪ್ಯಾಕೆಟ್‌ಗಳು ದೊರಕಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ಹೊನ್ನಾವರ ಪೊಲೀಸರು ಕರ್ನಾಟಕ ಅಬಕಾರಿ ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share