ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ರಾಷ್ಟ್ರೀಯ ಹೆದ್ದಾರಿಯ ಹಳಿಯಾಳ ಕ್ರಾಸ್ ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಪರಿಣಾಮ, ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಮರ ಬೀಳುತ್ತಿದ್ದಂತೆಯೇ ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಕೆಇಬಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಸ್ತೆಗೆ ಅಡ್ಡವಾಗಿದ್ದ ಮರ ಮತ್ತು ಹಾನಿಗೊಳಗಾದ ವಿದ್ಯುತ್ ಕಂಬವನ್ನು ತೆರವುಗೊಳಿಸಿದರು.
ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನರಾರಂಭಿಸಲಾಗಿದ್ದು, ಸದ್ಯ ಸಂಚಾರ ಸುಗಮವಾಗಿದೆ. ಮಳೆಗಾಲ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.