Friday, October 23, 2026
HomeLocal Newsಯೋಜನೆಯಿಂದ 251 ಹೆಕ್ಟೇರ್ ಪ್ರದೇಶಕ್ಕೆ ಅನುಕೂಲ: ಶಾಸಕ ಹೆಬ್ಬಾರ್

ಯೋಜನೆಯಿಂದ 251 ಹೆಕ್ಟೇರ್ ಪ್ರದೇಶಕ್ಕೆ ಅನುಕೂಲ: ಶಾಸಕ ಹೆಬ್ಬಾರ್

ಯಲ್ಲಾಪುರ: ಹುಲಗೋಡದಲ್ಲಿ ಕೈಗೆತ್ತಿಕೊಳ್ಳಲಾಗಿರುವ ನೀರಾವರಿ ಯೋಜನೆಯಿಂದ ನಾಲ್ಕು ಕೆರೆಗಳಿಗೆ ನೀರು ತುಂಬಿಸುವ ಮೂಲಕ 251 ಹೆಕ್ಟೇರ್ ಪ್ರದೇಶದ ರೈತರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಮದನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಗೋಡ ಗ್ರಾಮದಲ್ಲಿ ಸುಮಾರು ರೂ.8.68 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ನೀರಾವರಿ ಯೋಜನೆಯ ಕಾಮಗಾರಿಯನ್ನು ಭಾನುವಾರ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಯೋಜನೆಯ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು.

ಯೋಜನೆಯಿಂದ ಲಭ್ಯವಾಗುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದು ಕೂಡ ಮುಖ್ಯವಾಗಿದ್ದು, ಗ್ರಾಮಸ್ಥರು ಸಮಿತಿ ರಚಿಸಿಕೊಂಡು ಕೆರೆಗಳಿಗೆ ನೀರು ಹರಿಸುವುದು ಹಾಗೂ ನೀರಿನ ಬಳಕೆಯನ್ನು ನಿಯಂತ್ರಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಶಿವರಾಮ ಹೆಬ್ಬಾರ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್ ಸೇರಿದಂತೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share