Saturday, September 19, 2026
Join WhatsApp Group
HomeLocal Newsಹುಲೇಕಲ್‌ನಲ್ಲಿ ʻಪ್ರಜಾಸೇವೆʼ: 405 ಅರ್ಜಿಗಳ ಸ್ವೀಕಾರ

ಹುಲೇಕಲ್‌ನಲ್ಲಿ ʻಪ್ರಜಾಸೇವೆʼ: 405 ಅರ್ಜಿಗಳ ಸ್ವೀಕಾರ

ಶಿರಸಿ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ಅಧ್ಯಕ್ಷತೆಯಲ್ಲಿ ಹುಲೇಕಲ್‌ನಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹೋಬಳಿಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಸಲ್ಲಿಸಿದರು. ಒಟ್ಟು 405 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಸಂಬಂಧಪಟ್ಟ ಇಲಾಖೆಗೆ ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಿ, ನಿಯಮಾನುಸಾರ ವಿಲೇವಾರಿಗೆ ಕ್ರಮ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದು ಆದ್ಯತೆಯಾಗಿದೆ ಎಂದು ಹೇಳಿದರು. ಸ್ವೀಕರಿಸಿರುವ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರವಾಗಿ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ತಾಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಸೇರಿದಂತೆ ಹುಲೇಕಲ್ ಹೋಬಳಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share