Join WhatsApp Group
Ad
Home Local News ಹುಣಸಗೇರಿ–ಯಲ್ಲಾಪುರಕ್ಕೆ ನೂತನ ಬಸ್ ಸಂಚಾರ ಆರಂಭ

ಹುಣಸಗೇರಿ–ಯಲ್ಲಾಪುರಕ್ಕೆ ನೂತನ ಬಸ್ ಸಂಚಾರ ಆರಂಭ

0
8

ಯಲ್ಲಾಪುರ: ಗ್ರಾಮೀಣ ಭಾಗದ ಜನರ ಸಂಚಾರ ಸುಗಮಗೊಳಿಸುವುದು ನಮ್ಮ ಆದ್ಯತೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾರಿಗೆ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳವಳ್ಳಿ ಕ್ರಾಸ್‌ನಲ್ಲಿ ಹುಣಸಗೇರಿ–ಯಲ್ಲಾಪುರ ನಡುವೆ ನೂತನ ಬಸ್ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.

Ad

ಗ್ರಾಮೀಣ ಪ್ರದೇಶದ ಜನರಿಗೆ ಬಹುಕಾಲದ ಬೇಡಿಕೆಯಾಗಿದ್ದ ಈ ಬಸ್ ಸೇವೆ ಆರಂಭಗೊಂಡಿರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್‌ಐಆರ್ ಬ್ಲಾಕ್ ಉಸ್ತುವಾರಿ ಎನ್.ಕೆ. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಮಾಕು ಕೊಕರೆ, ಕಿರವತ್ತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರೆಹಮತ್ ಅಬ್ಬಿಗೇರಿ, ಎಪಿಎಂಸಿ ಮಾಜಿ ಅಧ್ಯಕ್ಷ ರಾಘವೇಂದ್ರ ಗೊಂದಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Previous articleಒಂದೊಂದಾಗಿ ಮಾಯವಾದ ಚಿನ್ನ | ಕೆಲಸದಾಕೆಯ ಮೇಲೆಯೇ ಅನುಮಾನ!
Next articleಪೊಲೀಸರ ಬಲೆಗೆ ಬಿದ್ದ ಬೈಕ್‌ ಕಳ್ಳ
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!