Thursday, October 22, 2026
HomeLocal Newsನದಿ ಜೋಡಣೆ ಯೋಜನೆ ವಿರೋಧಿಸಿ ನ. 3ರಂದು ಹೆದ್ದಾರಿ ತಡೆ: ಇಡಗುಂದಿಯಲ್ಲಿ ಪೂರ್ವಭಾವಿ ಸಭೆ

ನದಿ ಜೋಡಣೆ ಯೋಜನೆ ವಿರೋಧಿಸಿ ನ. 3ರಂದು ಹೆದ್ದಾರಿ ತಡೆ: ಇಡಗುಂದಿಯಲ್ಲಿ ಪೂರ್ವಭಾವಿ ಸಭೆ

ಯಲ್ಲಾಪುರ: ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ನ. 3ರಂದು ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ರಸ್ತೆ ತಡೆ ಸಂಚಾಲನಾ ಸಮಿತಿಯ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪೂರ್ವಭಾವಿ ಸಭೆಗಳು ನಡೆಯುತ್ತಿವೆ.

ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂರ್ವಭಾವಿ ಸಭೆ ಅ. 14ರ ರಾತ್ರಿ ಚಿನ್ನಾಪುರ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ರಸ್ತೆ ತಡೆ ಹೋರಾಟ ಸಮಿತಿ ಅಧ್ಯಕ್ಷ ನಾರಾಯಣ ಭಟ್ ಅಗ್ಗಾಶಿಕುಂಬ್ರಿ, “ಈ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಶ್ರೀಗಳವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಇದಾಗಿದೆ. ಮುಂದಿನ ತಲೆಮಾರಿನ ಭವಿಷ್ಯಕ್ಕಾಗಿ ನಡೆಯುತ್ತಿರುವ ಅಳಿವು-ಉಳಿವಿನ ಹೋರಾಟವಿದು. ನಮ್ಮ ಹೋರಾಟಕ್ಕೆ ಖಂಡಿತ ಗೆಲುವು ಸಿಗಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ” ಎಂದು ಹೇಳಿದರು.

ಸಭೆಯಲ್ಲಿ ಪ್ರೇಮಾನಂದ ನಾಯ್ಕ, ಎಸ್.ಎಂ. ಭಟ್ ಜಾಂಬಳಿಬೇಣ, ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಭಟ್ ಬಟ್ಲಗುಂಡಿ, ಅಶೋಕ್ ನಾಯ್ಕ ಚಿನ್ನಾಪುರ, ಶಿವರಾಮ ಭಟ್ ಕೋಮಡಿ ಮತ್ತಿತರರು ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ವೆಂಕಟ್ರಮಣ ಬೆಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಳ್ಳ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ ಹೋರಾಟದ ರೂಪುರೇಷೆಗಳನ್ನು ವಿವರಿಸಿದರು. ವಿಶ್ವೇಶ್ವರ ಏಕಾನ್ ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share