Friday, July 24, 2026
Join WhatsApp Group
HomeLocal Newsಟೀ ಅಂಗಡಿ ಟೇಬಲ್‌ ಮೇಲೆ ಮದ್ಯ; ಪ್ರಕರಣ ದಾಖಲು

ಟೀ ಅಂಗಡಿ ಟೇಬಲ್‌ ಮೇಲೆ ಮದ್ಯ; ಪ್ರಕರಣ ದಾಖಲು

ಜೋಯಿಡಾ: ತಾಲೂಕಿನ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನಮೋಡ ಗ್ರಾಮದಲ್ಲಿ ಅನಧಿಕೃತವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಆರೋಪದಡಿ ಚಹಾ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂಬಂಧ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಮೋಡ ನಿವಾಸಿ ಸುರೇಶ ಮರ್ತೋ ನಾಯ್ಕ (48) ಆರೋಪಿಯಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ತನ್ನ ಚಹಾ ಅಂಗಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮುಕ್ತವಾಗಿ ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾನೆ. ಮೇ 18ರಂದು ಬೆಳಿಗ್ಗೆ 11.40ರ ಸುಮಾರಿಗೆ ಪಿ.ಎಸ್.ಐ ಮಹಂತೇಶ ಯು. ನಾಯಕ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಅಂಗಡಿಯಲ್ಲಿ ಮದ್ಯ ಸೇವನೆ ನಡೆಯುತ್ತಿರುವುದು ಪತ್ತೆಯಾಗಿದೆ.

ದಾಳಿ ವೇಳೆ 90 ಮಿ.ಲೀ ಸಾಮರ್ಥ್ಯದ ಮದ್ಯ ತುಂಬಿದ ಎರಡು ಟೆಟ್ರಾ ಪೌಚ್‌ಗಳು, ಎರಡು ಖಾಲಿ ಟೆಟ್ರಾ ಪೌಚ್‌ಗಳು ಹಾಗೂ ಎರಡು ಪ್ಲಾಸ್ಟಿಕ್ ಗ್ಲಾಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಪಿ.ಎಸ್.ಐ ನೀಡಿದ ಸರ್ಕಾರಿ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share