Monday, September 7, 2026
Join WhatsApp Group
HomeUncategorizedಗೂಡಂಗಡಿಯಲ್ಲಿ ಮದ್ಯದ ಅಡ್ಡೆ;  ಅಂಕೋಲಾದಲ್ಲಿ ಪ್ರಕರಣ

ಗೂಡಂಗಡಿಯಲ್ಲಿ ಮದ್ಯದ ಅಡ್ಡೆ;  ಅಂಕೋಲಾದಲ್ಲಿ ಪ್ರಕರಣ

ಅಂಕೋಲಾ: ತಾಲೂಕಿನ ತೆಂಕಣಕೇರಿ ಪ್ರದೇಶದಲ್ಲಿ ಅಂಗಡಿ ಎದುರು ಅನಧಿಕೃತವಾಗಿ ಮದ್ಯ ಸೇವನೆಗೆ ಅವಕಾಶ ನೀಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದಯಾನಂದ ಗಾಂವಕರ (46), ಸುರೇಶ ಗಾಂವಕರ (65) ಹಾಗೂ ಶ್ರೀಕಾಂತ ಗಾಂವಕರ (61) ಆರೋಪಿಗಳಾಗಿದ್ದಾರೆ. ಇವರು ಪೂಜಗೇರಿ ನಿವಾಸಿಗಳಾಗಿದ್ದು, ಅಂಗಡಿ ವ್ಯಾಪಾರ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ. 18ರಂದು ರಾತ್ರಿ ಅಂಕೋಲಾ-ಮಂಜಗುಣಿ ರಸ್ತೆಯ ಬದಿಯಲ್ಲಿರುವ ಅಂಗಡಿ ಎದುರು ಯಾವುದೇ ಪರವಾನಿಗೆ ಪಡೆಯದೇ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ ವೇಳೆ ವಿವಿಧ ಬ್ರ್ಯಾಂಡ್‌ಗಳ ಮದ್ಯದ ತುಂಬಿದ ಹಾಗೂ ಖಾಲಿ ಟೆಟ್ರಾ ಪ್ಯಾಕೆಟ್‌ಗಳು, ಮದ್ಯದ ಬಾಟಲಿಗಳು ಹಾಗೂ ಪ್ಲಾಸ್ಟಿಕ್ ಗ್ಲಾಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share