Friday, July 24, 2026
Join WhatsApp Group
HomeLocal Newsಅನಧಿಕೃತ ಸಿಗಡಿ ಕೃಷಿ ಕುರಿತು ವರದಿ ನೀಡಿ

ಅನಧಿಕೃತ ಸಿಗಡಿ ಕೃಷಿ ಕುರಿತು ವರದಿ ನೀಡಿ

ಕಾರವಾರ: ಚೆಂಡಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ ಪರವಾನಿಗೆಯಿಲ್ಲದೆ ಅನಧಿಕೃತವಾಗಿ ನಡೆಸುತ್ತಿರುವ ಸಿಗಡಿ ಕೃಷಿ ಹೊಂಡಗಳಿರುವ ಸ್ಥಳಕ್ಕೆ ಭೇಟಿ ನೀಡಿ, ಸಿಗಡಿ ಕೃಷಿಗೆ ಸಂಬಂಧಿಸಿ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಆಡಳಿತಾಧಿಕಾರಿ ಪ್ರಶಾಂತ ಎಸ್.ಹೆಚ್. ಸೂಚಿಸಿದರು.

ಚೆಂಡಿಯಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಂದಾಯ ಅಧಿಕಾರಿ ಮತ್ತು ಪಂಚಾಯತ ಸಿಬ್ಬಂದಿಗಳೊಂದಿಗೆ ಸ್ಥಳ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವ ಬಗ್ಗೆ ಆ ಭಾಗದ ಗ್ರಾಮಸ್ಥರಲ್ಲಿ ಸ್ಥಾನಿಕವಾಗಿ ಚರ್ಚಿಸಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ನಿರ್ಮಾಣ ಮಾಡುವ ಬಗ್ಗೆ ವಿಶ್ವಾಸ ಮೂಡಿಸಿ, ಸಾರ್ವಜನಿಕರು ನೀಡಿದ ತಕರಾರು ಅರ್ಜಿಗಳನ್ನು ಹಾಗೂ ಇತರೆ ಕುಂದು ಕೊರತೆ ಅರ್ಜಿಗಳನ್ನು ಪರಿಶೀಲಿಸಿದರು.

ಬೇಸಿಗೆಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸ್ಥಳಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚನೆ ನೀಡಿ, ಮಳೇಗಾಲದಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಹ ಉಂಟಾಗುವ ಸಂಭವನೀಯ ಸ್ಥಳಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ರಾ.ಹೆ. 66ರ ಎರಡು ಬದಿಯಲ್ಲಿರುವ ಚರಂಡಿಗಳಲ್ಲಿರುವ ಮಣ್ಣನ್ನು ಹೂಳೆತ್ತುವ ಕಾಮಗಾರಿಗನ್ನು ಕೈಗೊಳ್ಳಲು ಐ.ಆರ್.ಬಿ. ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಚೆಂಡಿಯಾ ವ್ಯಾಪ್ತಿಯ ಒಕ್ಕಲಕೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share