Thursday, July 23, 2026
Join WhatsApp Group
HomeLocal News'ನೆಕ್ಸ್ಟ್ ಲೆವೆಲ್ ವ್ಯೂ' ತೋರಿಸಿದ ಯೂಟ್ಯೂಬರ್‌; ಮೂವರ ವಿರುದ್ಧ ಎಫ್‌ಐಆರ್!

‘ನೆಕ್ಸ್ಟ್ ಲೆವೆಲ್ ವ್ಯೂ’ ತೋರಿಸಿದ ಯೂಟ್ಯೂಬರ್‌; ಮೂವರ ವಿರುದ್ಧ ಎಫ್‌ಐಆರ್!

ಸಿದ್ದಾಪುರ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೀಕ್ಷಣೆ  ಪಡೆಯುವ ಉದ್ದೇಶದಿಂದ ಜೋಗ ಜಲಪಾತದ ಅತ್ಯಂತ ಅಪಾಯಕಾರಿ ಪ್ರದೇಶಕ್ಕೆ ತೆರಳಿ ವಿಡಿಯೋ ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಆರೋಪದ ಮೇಲೆ ಯೂಟ್ಯೂಬರ್ ಸೇರಿ ಮೂವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೋಗಿನ್‌ಕೊಪ್ಪದ ಮೋಹನ ಶುಭಕರ ಗೌಡ (26), ಭರತ ಗೌಡ (27) ಹಾಗೂ ತೀರ್ಥಹಳ್ಳಿಯ ಮದನ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜೂನ್ 29ರಂದು ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಸಿಬ್ಬಂದಿಗೆ ‘ಮಿಸ್ಟರ್ ಕನ್ನಡಿಗ’ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜೋಗ ಜಲಪಾತದ ವಿಡಿಯೋ ಪತ್ತೆಯಾಗಿದೆ. ಪರಿಶೀಲನೆ ವೇಳೆ ಮೂವರು ಜೋಗ ಜಲಪಾತದ ಅತ್ಯಂತ ಅಪಾಯಕಾರಿ ರಾಜಾ ಫಾಲ್ಸ್ ಕಲ್ಲಿನ ಬಂಡೆಯ ಮೇಲೆ ನಿಂತು ವಿಡಿಯೋ ಮಾಡಿ, “ನೆಕ್ಸ್ಟ್ ಲೆವೆಲ್ ವ್ಯೂ” ಎಂದು ಹೇಳುತ್ತಾ ದೃಶ್ಯಗಳನ್ನು ಚಿತ್ರೀಕರಿಸಿರುವುದು ಕಂಡುಬಂದಿದೆ.

ತನಿಖೆಯಲ್ಲಿ ಆರೋಪಿಗಳು ಜೂನ್ 25ರಂದು ಅಪಾಯಕಾರಿ ಪ್ರದೇಶಕ್ಕೆ ತೆರಳಿ ವಿಡಿಯೋ ಚಿತ್ರೀಕರಿಸಿ, ಜೂನ್ 28ರಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವುದು ಬೆಳಕಿಗೆ ಬಂದಿದೆ.

ಪ್ರವಾಸಿಗರು ಈ ರೀತಿಯ ವಿಡಿಯೋಗಳನ್ನು ನೋಡಿ ಅದೇ ಸ್ಥಳಕ್ಕೆ ತೆರಳಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ, ಸೂಚನಾ ಫಲಕಗಳು ಮತ್ತು ಎಚ್ಚರಿಕೆಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯವಾಗುವ ಕೃತ್ಯ ಎಸಗಿದ ಆರೋಪದಡಿ ಸಿದ್ದಾಪುರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಾಂತಿನಾಥ ಕೆ. ಪಾಸಾನೆ ಅವರು ಸ್ವಯಂ ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

1 COMMENT

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share