Sunday, September 6, 2026
Join WhatsApp Group
HomeLocal Newsಕಳಚೆಯಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

ಕಳಚೆಯಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತದ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಹೆಬ್ಬಾರಕುಂಬ್ರಿ ಸಮೀಪದ ರಸ್ತೆಯ ಮೊದಲ ತಿರುವಿನಲ್ಲಿ ಧರೆ ಕುಸಿದು, ಬಂಡೆಕಲ್ಲು ಹಾಗೂ ಮಣ್ಣು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.

ಇದರಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ. ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಮಳೆಗಾಲ ಬಂದಾಗಲೆಲ್ಲ ಭೂಕುಸಿತದ ಭೀತಿ ಕಾಡುತ್ತಿದ್ದು, ಕಳಚೆ ಈಗಾಗಲೇ ಜಿಲ್ಲಾಡಳಿತದ ಗಮನ ಸೆಳೆದಿರುವ ಭೂಕುಸಿತ ಹಾಟ್‌ಸ್ಪಾಟ್ ಪ್ರದೇಶವಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಬುಧವಾರ ರಾತ್ರಿಯಿಡೀ ಭಾರೀ ಗಾಳಿ ಸಹಿತ ಸುರಿದ ಮಳೆಯ ಪರಿಣಾಮವಾಗಿ ಈ ಕುಸಿತ ಸಂಭವಿಸಿದೆ. ರಸ್ತೆಯ ಮೇಲೆ ಬಂಡೆಕಲ್ಲು ಮತ್ತು ಮಣ್ಣು ಜಾರಿಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುವ ಅಗತ್ಯ ಎದುರಾಗಿದೆ.

ಮಳೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ರಸ್ತೆ ತೆರವುಗೊಳಿಸಿ, ಅಪಾಯದ ಪ್ರದೇಶಗಳ ಸ್ಥಿತಿಯನ್ನು ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share