Thursday, October 22, 2026
HomeLocal Newsಯಲ್ಲಾಪುರ | ಸಾಂಸ್ಕೃತಿಕ ವೈಭವಕ್ಕೆ ಮೆರುಗು ತಂದ ಶಾರದಾ ಉತ್ಸವ

ಯಲ್ಲಾಪುರ | ಸಾಂಸ್ಕೃತಿಕ ವೈಭವಕ್ಕೆ ಮೆರುಗು ತಂದ ಶಾರದಾ ಉತ್ಸವ

ಯಲ್ಲಾಪುರ: ಗ್ರಾಮೀಣ ಭಾಗದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಜನರಲ್ಲಿ ಧಾರ್ಮಿಕ ಶ್ರದ್ಧೆ ಮೂಡಿಸುವಲ್ಲಿ ಶಾರದಾ ಉತ್ಸವ ಸಮಿತಿ ನಿರಂತರವಾಗಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಮಾವಿನಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಬೋಳ್ಮನೆ ಹೇಳಿದರು.

ತಾಲೂಕಿನ ಕಳಚೆಯಲ್ಲಿ ಲಕ್ಷ್ಮೀ ನರಸಿಂಹ ಯುವಕ ಸಂಘ ಹಾಗೂ ಶಾರದಾ ಉತ್ಸವ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಶಾರದಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ ಮಾತನಾಡಿ, ಎಲ್ಲರ ಸಹಭಾಗಿತ್ವವಿದ್ದಾಗ ಇಂತಹ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಲು ಸಾಧ್ಯ. ಶಾರದಾ ಉತ್ಸವವನ್ನು ನಿರಂತರವಾಗಿ ಆಚರಿಸಿಕೊಂಡು ಬರುವ ಮೂಲಕ ಸಮಿತಿ ಮಾದರಿಯಾಗಿದೆ ಎಂದರು.

ಹಿರಿಯ ನ್ಯಾಯವಾದಿ ಜಿ.ಆರ್. ಹೆಗಡೆ ಮಾತನಾಡಿ, ಶಾರದಾ ಉತ್ಸವ ಸಮಿತಿಯ ಕಲಾತ್ಮಕ ಕೊಡುಗೆಗಳನ್ನು ಸ್ಮರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಮಾಜಿಕ ಕಾರ್ಯಕರ್ತ ರವಿ ಹುಳಸೆ ಮಾತನಾಡಿ, ವಿಭಿನ್ನ ಕಾರ್ಯಕ್ರಮಗಳ ಮೂಲಕ ಈ ನೆಲದ ಘನತೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸಂಕಲ್ಪ ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ ಉಮೇಶ ಭಾಗ್ವತ್ ಉಪಸ್ಥಿತರಿದ್ದರು.

ದಿಶಾ ಹೆಬ್ಬಾರ್ ಪ್ರಾರ್ಥಿಸಿದರು. ರಾಮಕೃಷ್ಣ ಹೆಗಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ಗಾಂವ್ಕರ್ ವಂದಿಸಿದರು. ರಂಜನಾ ಹುಳಸೆ ಹರಿಕಥೆ ನಡೆಸಿಕೊಟ್ಟರೆ, ನಾಗೇಂದ್ರ ವೈದ್ಯ ತಬಲಾ ಸಾಥ್ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share