Friday, July 24, 2026
Join WhatsApp Group
HomeLocal Newsಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ

ರಸ್ತೆ ಸಂಚಾರದಲ್ಲಿ ಬದಲಾವಣೆ

ಕಾರವಾರ: ಹುಬ್ಬಳ್ಳಿ-ಕಾರವಾರ ರಾಷ್ಟ್ರೀಯ ಹೆದ್ದಾರಿ 63ರ ದೇವಿಕೊಪ್ಪ ಗ್ರಾಮದ ಐ.ಬಿ ಕ್ರಾಸ್ ಬಳಿ ಏಪ್ರಿಲ್ 22ರಂದು ಎಲ್‌ಪಿಜಿ ಅನಿಲ ಹೊತ್ತೊಯ್ಯುತ್ತಿದ್ದ ಅಶೋಕ್ ಟ್ಯಾಂಕರ್ ಅಪಘಾತಕ್ಕೊಳಗಾಗಿದ್ದು, ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದೆ.

ಅನಿಲ ಸೋರಿಕೆಯಿಂದಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಘಟಗಿ-ಯಲ್ಲಾಪುರ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ.

ಪರ್ಯಾಯ ಮಾರ್ಗಗಳ ವಿವರ: ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಸಂಭವನೀಯ ಅನಾಹುತ ತಡೆಯಲು ಪೊಲೀಸ್ ಇಲಾಖೆಯು ವಾಹನಗಳ ಸಂಚಾರ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಿದೆ.

 * ಹುಬ್ಬಳ್ಳಿ -ಕಾರವಾರ-ಅಂಕೋಲಾ ಕಡೆಗೆ ಹೋಗುವವರು ಹುಬ್ಬಳ್ಳಿಯಿಂದ ತಡಸ್ ಕ್ರಾಸ್-ಮುಂಡಗೋಡ ಮಾರ್ಗವಾಗಿ ಸಂಚರಿಸಬೇಕು.

 * ಧಾರವಾಡ-ಕಲಘಟಗಿ-ಯಲ್ಲಾಪುರ ಮಾರ್ಗದ ವಾಹನಗಳು ಹುಬ್ಬಳ್ಳಿ – ತಡಸ್ ಕ್ರಾಸ್ – ಮುಂಡಗೋಡ ಮಾರ್ಗವನ್ನೇ ಬಳಸಬೇಕು.

 * ಯಲ್ಲಾಪುರದಿಂದ ಹುಬ್ಬಳ್ಳಿ/ಧಾರವಾಡಕ್ಕೆ ಬರುವವರು ಯಲ್ಲಾಪುರ ಹಳಿಯಾಳ ಕ್ರಾಸ್-ಹಳಿಯಾಳ- ಧಾರವಾಡ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

 * ತಡಸ್ ಗ್ರಾಮದಿಂದ ಬರುವವರು ತಬಕದ ಹೊನ್ನಳ್ಳಿ-ಕಲಘಟಗಿ ಮಾರ್ಗದ ಬದಲಾಗಿ ಮುಂಡಗೋಡ-ಶಿರಸಿ ಮಾರ್ಗವನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ ಮತ್ತು ಮುಂಡಗೋಡ ಪೊಲೀಸ್ ಠಾಣೆಗಳಿಗೆ ತುರ್ತು ಮಾಹಿತಿ ರವಾನಿಸಲಾಗಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಪೊಲೀಸರೊಂದಿಗೆ ಸಹಕರಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಕೋರಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share