ಕಾರವಾರ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಮಲಾಕರ ಭಟ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಮಲಾಕರ ಭಟ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಇದಕ್ಕೂ ಮೊದಲು ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಕಮಲಾಕರ ಭಟ್ ಈಗಾಗಲೇ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಈ ನಡುವೆ ಶಿವಮೊಗ್ಗ ಜಿಲ್ಲೆಯ ತುಂಗಾನಗರ ವ್ಯಾಪ್ತಿಯಲ್ಲಿ ನಡೆದಿರುವ ಮತ್ತೊಂದು ಘಟನೆಗೆ ಸಂಬಂಧಿಸಿ ಅಪ್ರಾಪ್ತೆಯ ಮೈ-ಕೈ ಮುಟ್ಟಿದ ಆರೋಪ ಕೇಳಿಬಂದಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಆರೋಪಿಯ ವಿರುದ್ಧ ಹೆಚ್ಚಿನ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ ಎನ್ನಲಾಗಿದೆ.