Friday, March 13, 2026
HomeState‌ಗ್ಯಾಸ್‌ ಟ್ರಬಲ್;‌ ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳ್ಳಿ!

‌ಗ್ಯಾಸ್‌ ಟ್ರಬಲ್;‌ ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳ್ಳಿ!

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ತಾತ್ಕಾಲಿಕ ತೊಂದರೆ ಉಂಟಾದ ಹಿನ್ನೆಲೆಯಲ್ಲಿ, ಲಭ್ಯವಿರುವ ಸಿಲಿಂಡರ್‌ಗಳನ್ನು ಮೊದಲ ಆದ್ಯತೆಯಲ್ಲಿ ಆಸ್ಪತ್ರೆಗಳು, ವಸತಿನಿಲಯಗಳು ಮತ್ತು ವಸತಿ ಶಾಲೆಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.‌ ಮುನಿಯಪ್ಪ ತಿಳಿಸಿದ್ದಾರೆ.

ಮಾರ್ಚ್‌ 13ರಂದು ನಡೆದ ವಿಧಾನ ಪರಿಷತ್ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸಚಿವರು, ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಪೂರೈಕೆ ಸುಧಾರಣೆಗೆ ಕನಿಷ್ಠ ಒಂದು ವಾರ ಸಮಯ ಬೇಕಾಗಬಹುದು ಎಂದು ಹೇಳಿದರು.

ಶುಕ್ರವಾರ ತಾವು ತೈಲ ಮಾರುಕಟ್ಟೆ ಕಂಪನಿಗಳ (OMCs) ಪ್ರತಿನಿಧಿಗಳನ್ನು ಮತ್ತೆ ಭೇಟಿ ಮಾಡಿದ್ದು, ರಾಜ್ಯದಲ್ಲಿ ಸಾಕಷ್ಟು ಎಲ್‌ಪಿಜಿ ಸಂಗ್ರಹ ಲಭ್ಯವಿದೆ ಎಂದು ಅವರು ತಿಳಿಸಿರುವುದಾಗಿ ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಪ್ರಸ್ತುತ ಲಭ್ಯವಿರುವ ವಾಣಿಜ್ಯ ಸಿಲಿಂಡರ್‌ಗಳನ್ನು ಆಸ್ಪತ್ರೆಗಳು, ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ಅಗತ್ಯ ಆಹಾರ ತಯಾರಿಕೆಗೆ ಬಳಸುವಂತೆ ಆದ್ಯತೆಯಲ್ಲಿ ಪೂರೈಕೆ ಮಾಡಲಾಗುತ್ತದೆ. ಹೋಟೆಲ್‌ಗಳಿಗೆ ಸಿಲಿಂಡರ್‌ ಪೂರೈಕೆ ಪುನಃ ಸಾಮಾನ್ಯವಾಗಲು ಕನಿಷ್ಠ ಒಂದು ವಾರ ಬೇಕಾಗಬಹುದು ಎಂದು ಅವರು ತಿಳಿಸಿದರು.

ಇದರಿಂದಾಗಿ ಹೋಟೆಲ್‌ಗಳು ತಾತ್ಕಾಲಿಕವಾಗಿ ಅಗತ್ಯವಿರುವ ಕೆಲವು ಆಹಾರ ಪದಾರ್ಥಗಳನ್ನು ತಯಾರಿಸಲು ವಿದ್ಯುತ್‌ ಸ್ಟೌವ್‌ಗಳನ್ನು ಬಳಸುವಂತೆ ಸರ್ಕಾರ ಸಲಹೆ ನೀಡಿದೆ ಎಂದು ಸಚಿವರು ಹೇಳಿದರು.

ಇದೇ ವೇಳೆ, ಎಲ್‌ಪಿಜಿ ಸಿಲಿಂಡರ್‌ಗಳ ಕಳ್ಳಬಜಾರ್‌ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share