Friday, March 13, 2026
HomeStateಮಕ್ಕಳ ಹಿತಕ್ಕಾಗಿ ಮೊಬೈಲ್ ನಿರ್ಬಂಧಕ್ಕೆ ಚಿಂತನೆ

ಮಕ್ಕಳ ಹಿತಕ್ಕಾಗಿ ಮೊಬೈಲ್ ನಿರ್ಬಂಧಕ್ಕೆ ಚಿಂತನೆ

ಬೆಂಗಳೂರು: ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್ ಮತ್ತು ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚುತ್ತಿರುವುದು ಶಿಕ್ಷಣ ತಜ್ಞರು ಹಾಗೂ ಪೋಷಕರಲ್ಲಿ ಆತಂಕ ಹುಟ್ಟಿಸಿದೆ. ಪಾಠ, ಆಟ, ಊಟದಂತಹ ಮೂಲಭೂತ ಚಟುವಟಿಕೆಗಳತ್ತ ಆಸಕ್ತಿ ಕುಸಿದು, ಮಕ್ಕಳು ಡಿಜಿಟಲ್ ಲೋಕದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಈ ಹಿನ್ನೆಲೆಯಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ.

ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಸ್ತಾಪ ಕುರಿತು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಅವರ ಸೂಚನೆಗೆ ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಇದೇ ಸಭೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕುರಿತೂ ಚರ್ಚೆ ನಡೆಯಿತು. ಡ್ರಗ್ಸ್ ಎಂಬ ಪಿಡುಗಿನಿಂದ ಕ್ಯಾಂಪಸ್‌ಗಳನ್ನು ಸಂಪೂರ್ಣ ಮುಕ್ತಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಕುಲಪತಿಗಳಿಗೆ ಸೂಚನೆ ನೀಡಿದರು.

ಮಕ್ಕಳ ಹಿತದೃಷ್ಟಿಯಿಂದ ಹಾಗೂ ಶೈಕ್ಷಣಿಕ ವಾತಾವರಣ ಕಾಪಾಡುವ ಉದ್ದೇಶದಿಂದ ಸರ್ಕಾರದ ಈ ಕ್ರಮ ಮಹತ್ವದ್ದೆಂದು ಶಿಕ್ಷಣ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share