Friday, July 24, 2026
Join WhatsApp Group
HomeLocal Newsಡಾ. ಬಾಬು ಜಗಜೀವನ ರಾಮ್, ಡಾ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಡಾ. ಬಾಬು ಜಗಜೀವನ ರಾಮ್, ಡಾ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಕಾರವಾರ: ಜಿಲ್ಲೆಯಲ್ಲಿ ಏಪ್ರಿಲ್ 5ರಂದು ಡಾ.ಬಾಬು ಜಗಜೀವನ ರಾಮ್ ಮತ್ತು ಏಪ್ರಿಲ್ 14ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬು ಜಗಜೀವನ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಪ್ರಿಲ್ 14ರಂದು ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪ ನಮನ ಮತ್ತು ಪೂಜೆ ಸಲ್ಲಿಸಿ, ಭಾವಚಿತ್ರಗಳನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ಆಯೋಜಿಸುವಂತೆ ತಿಳಿಸಿದರು.

ಡಾ. ಬಾಬು ಜಗಜೀವನ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪ.ಜಾತಿ ಮತ್ತು ಪ.ಪಂಗಡದ ಪ್ರತಿಭಾನ್ವಿತರಿಗೆ, ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಸಿಬ್ಬಂದಿಗಳು ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು, ಪೊಲೀಸ್ ಇಲಾಖೆ ವತಿಯಿಂದ ಮೆರವಣಿಗೆಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್ ಬ್ಯಾಂಡ್ ಒದಗಿಸಬೇಕು ಎಂದರು.

ಇತ್ತೀಚೆಗೆ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿರುವ ಜಿಲ್ಲೆಯ ಪ.ಜಾತಿ ಪಂಗಡದ ಪ್ರತಿಭಾನ್ವಿತರನ್ನು ಸನ್ಮಾನಿಸುವಂತೆ ಮತ್ತು ಕಾರವಾರದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಮುದಾಯದ ಮುಖಂಡರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್‌ , ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಮೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಪ.ಜಾತಿ/ಪಂಗಡದ ಸಮುದಾಯಗಳ ಮುಖಂಡರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share