ಪ್ಯಾನಲ್ ವಕೀಲರ ನೇಮಕ; ಅರ್ಜಿ ಆಹ್ವಾನ
ಕಾರವಾರ: ಪಂಚಾಯತ ರಾಜ್ ಸಂಸ್ಥೆಗಳ ವಿರುದ್ಧ ಅಧಿನಿಯಮದ ಯಾವುದೇ ಪ್ರಕರಣ, ನಿಯಮ ಅಥವಾ ಜಿಲ್ಲಾ ಪಂಚಾಯತಿಯ ವಿರುದ್ಧ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗುವ ದಾವೆ/ ಮೊಕದ್ದಮೆಗಳಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಪರವಾಗಿ ವಾದವನ್ನು ಮಂಡಿಸಲು ಜಿಲ್ಲಾ ಪಂಚಾಯತ ಪರವಾಗಿ ದಾಖಲಾಗುವ ದಾವೆ/ ಮೊಕದ್ದಮೆಗಳಲ್ಲಿ ಸಮರ್ಥವಾಗಿ ಜಿಲ್ಲಾ ಪಂಚಾಯತ/ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಪರವಾಗಿ ಸಮರ್ಥವಾಗಿ ವಾದ ಮಂಡಿಸಲು, ಆಕ್ಷೇಪಣಾ ಹೇಳಿಕೆಗಳು, ಪ್ರತಿರಕ್ಷಾ ಹೇಳಿಕೆ, ಕಂಡಿಕೆವಾರು ಉತ್ತರಗಳನ್ನು ಸಿದ್ಧಪಡಿಸಲು ಮತ್ತು ಒಟ್ಟಾರೆ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪ್ರಕರಣಗಳು ಜಿಲ್ಲಾ ಪಂಚಾಯತ ಪರವಾಗಿ ಆಗುವಂತೆ ಕ್ರಮ ವಹಿಸಲು ಆಯಾಯ ನ್ಯಾಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ವಕೀಲರನ್ನು Panel of Advocates ಆಗಿ ನೇಮಿಸಿಕೊಳ್ಳಲು ಅರ್ಹ ಹಿರಿಯ ನ್ಯಾಯವಾದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ನ್ಯಾಯವಾದಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಹಾಗೂ ಸದರಿ ಪತ್ರದೊಂದಿಗೆ ಲಗತ್ತಿಸಿದ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲಾ ಪಂಚಾಯತ ಕಾರ್ಯಾಲಯಕ್ಕೆ ಏ.24 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ಜಿಲ್ಲಾ ಪಂಚಾಯತ ವೆಬ್‌ಸೈಟ್ https://zpuk.karnataka.gov.in ನಲ್ಲಿ ಪಡೆಯಬಹುದೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಪೂರ್ವ ಉಚಿತ ಕೋಚಿಂಗ್: ಅರ್ಜಿ ಆಹ್ವಾನ
ಕಾರವಾರ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಆಯ್ದ ಕಾಲೇಜುಗಳಲ್ಲಿ (CENTER OF EXCELLANCE) 2026-27ನೇ ಶೈಕ್ಷಣಿಕ ಸಾಲಿನಿಂದ ವಸತಿಯುತ ಎರಡು ವರ್ಷಗಳ ಪಿ.ಯು.ಸಿ ಶಿಕ್ಷಣದೊಂದಿಗೆ NEET/ IIT-JEE/ K-CET /ICAR /CUET /CA-FOUNDATION /CLAT ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ಕೋಚಿಂಗ್ ನೀಡಲು ಪ್ರವೇಶಾತಿಗಾಗಿ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಾಲತಾಣ https://dom.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಏ.21 ಕೊನೆಯ ದಿನವಾಗಿದೆ.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂಖ್ಯೆ 08382-220336 ಅಥವಾ ತಾಲೂಕು ಮಾಹಿತಿ ಕೇಂದ್ರಗಳಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ ಕುರಿ ಸಾಕಾಣಿಕೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಏ.15ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ-ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ, ಮಾಹಿತಿ ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾರಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-8217236973, 9483485489, 9482188780 ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.