Saturday, June 13, 2026
HomeCrimeಬೈಕ್–ಆಟೋ ಡಿಕ್ಕಿ; ಇಬ್ಬರು ಚಾಲಕರ ವಿರುದ್ಧ ಪ್ರಕರಣ

ಬೈಕ್–ಆಟೋ ಡಿಕ್ಕಿ; ಇಬ್ಬರು ಚಾಲಕರ ವಿರುದ್ಧ ಪ್ರಕರಣ

ಕಾರವಾರ: ನಂದನಗದ್ದಾ–ಸುಂಕೇರಿ ರಸ್ತೆಯಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಹಿಂಬದಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಈ ಸಂಬಂಧ ಎರಡೂ ವಾಹನಗಳ ಚಾಲಕರ ವಿರುದ್ಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಳಮಕ್ಕಿ ನಿವಾಸಿ ಸುಬ್ರಾಯ ಸೋಮ ಗೌಡ ಅವರು ನೀಡಿದ ದೂರಿನ ಮೇರೆಗೆ, ಬೈಕ್ ಸವಾರ ಗಿರೀಶ ಗೋಪಾಲ ಗೌಡ (21) ಹಾಗೂ ಆಟೋ ರಿಕ್ಷಾ ಚಾಲಕ ಎಸ್.ಕೆ. ಅಸ್ಲಾಂ ನೂರ ಅಲಂ ಶೇಖ್ (35) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜೂನ್ 10ರಂದು ಸಂಜೆ ಸುಮಾರು 5.45 ಗಂಟೆಗೆ ಗಿರೀಶ ಗೋಪಾಲ ಗೌಡ ಅವರು ತಮ್ಮ ಸಹೋದರ ಲೋಕೇಶ ಗೋಪಾಲ ಗೌಡರನ್ನು ಬೈಕ್‌ನ ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡು ನಂದನಗದ್ದಾದಿಂದ ಸುಂಕೇರಿ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಎದುರಿನ ದಿಕ್ಕಿನಿಂದ ಆಟೋ ರಿಕ್ಷಾ ಚಾಲಕ ಎಸ್.ಕೆ. ಅಸ್ಲಾಂ ಅವರು ವಾಹನ ಚಲಾಯಿಸಿಕೊಂಡು ಬರುತ್ತಿದ್ದರು.

ಎರಡೂ ವಾಹನಗಳು ರಸ್ತೆಯ ಮಧ್ಯಭಾಗದಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ವೇಳೆ, ಬೈಕ್ ಸವಾರ ಬ್ರೇಕ್ ಹಾಕಿದ ಪರಿಣಾಮ ವಾಹನ ಸ್ಕಿಡ್ ಆಗಿ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ ಲೋಕೇಶ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಬೈಕ್ ಸವಾರ ಗಿರೀಶ ಅವರ ಮೂಗು ಹಾಗೂ ಎಡ ಭುಜಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.

ಅಜಾಗರೂಕತೆ ಮತ್ತು ಅಪಾಯಕಾರಿಯಾಗಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಎರಡೂ ವಾಹನಗಳ ಚಾಲಕರ ವಿರುದ್ಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share