Monday, September 7, 2026
Join WhatsApp Group
HomeLocal Newsಬಿಣಗಾ-ಅರಗಾ ನಡುವೆ ಏಕಮುಖ ಸಂಚಾರ ಜಾರಿ

ಬಿಣಗಾ-ಅರಗಾ ನಡುವೆ ಏಕಮುಖ ಸಂಚಾರ ಜಾರಿ

ಕಾರವಾರ: ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿತದ ಅಪಾಯ ಹೆಚ್ಚಿರುವ ಕಾರಣ, ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹೆದ್ದಾರಿಯ ಅಂಚಿನಲ್ಲಿರುವ ಗುಡ್ಡದಿಂದ ಮಳೆ ನೀರಿನ ರಭಸಕ್ಕೆ ಕಲ್ಲು-ಮಣ್ಣು ರಸ್ತೆಗೆ ಕುಸಿಯುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಜುಲೈ 4ರಿಂದ ಮಳೆಗಾಲ ಮುಗಿಯುವವರೆಗೆ ಬಿಣಗಾದಿಂದ ಅರಗಾ ಗ್ರಾಮದವರೆಗಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ **ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ** ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಂಚಾರ ನಿಯಮಗಳನ್ನು ಪಾಲಿಸುವಂತೆ ವಾಹನ ಸವಾರರಿಗೆ ಜಿಲ್ಲಾಡಳಿತ ಮನವಿ ಮಾಡಿದ್ದು, ಸ್ಥಳದಲ್ಲಿರುವ ಪೊಲೀಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಕೋರಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share