Thursday, October 22, 2026
HomeLocal Newsಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಲಿಂಗರಾಜ್ ಪಾಟೀಲ್

ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ: ಲಿಂಗರಾಜ್ ಪಾಟೀಲ್

ಕಾರವಾರ: ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಎಸ್. ಸಂಕನೂರ್ ಅವರನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ್ ಪಾಟೀಲ್ ಹೇಳಿದರು.

ಕಾರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಂಕನೂರ್ ಅವರಿಗೆ ಬೆಂಬಲ ನೀಡುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಮಾತನಾಡಿ, ಸಂಕನೂರ್ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ವಿ.ಎಸ್. ಸಂಕನೂರ್ ಮಾತನಾಡಿ, ಕಳೆದ ಎರಡು ಅವಧಿಗಳಲ್ಲಿ ತಮ್ಮನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಈ ಚುನಾವಣೆಯಲ್ಲಿಯೂ ತಮ್ಮನ್ನು ಬೆಂಬಲಿಸಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಸಭೆಯ ಆರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಲಿಂಗರಾಜ್ ಪಾಟೀಲ್ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಎಸ್. ಸಂಕನೂರ್ ಅವರನ್ನು ರೂಪಾಲಿ ಎಸ್. ನಾಯ್ಕ ಸನ್ಮಾನಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ ಹರ್ತೆಬೈಲ್, ಜಿಲ್ಲಾ ಉಪಾಧ್ಯಕ್ಷ ಸಂಜಯ ಸಾಲುಂಕೆ, ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ರಾಜು ಭಂಡಾರಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ರಾಜ್ಯ ಪ್ರಕೋಷ್ಠದ ಸುನಿಲ್ ಸೋನಿ, ರವಿರಾಜ್ ಅಂಕೋಲೆಕರ್, ನಾಗೇಶ್ ಕೂರಡೇಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ನಾಗೇಶ್ ಕುರಡೇಕರ್ ಸ್ವಾಗತಿಸಿದರು. ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಸುಭಾಷ್ ಗುನಗಿ ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share