Monday, September 7, 2026
Join WhatsApp Group
HomeLocal Newsಕಾರವಾರ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚು ಭಾರದ ವಾಹನಗಳಿಗೆ ನಿಷೇಧ

ಕಾರವಾರ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚು ಭಾರದ ವಾಹನಗಳಿಗೆ ನಿಷೇಧ

ಕಾರವಾರ: ಕಾರವಾರ ತಾಲೂಕಿನ ರಾಜ್ಯ ಹೆದ್ದಾರಿ–6ರ ಕಾರವಾರ–ದೇವಳಮಕ್ಕಿ–ಕೆರವಾಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರ ಹೊಂದಿರುವ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಉಂಟಾಗಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಾಳಾಗಿರುವ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ, ಸಾರ್ವಜನಿಕರ ಲಘು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಪಟ್ಟ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ.

ರಸ್ತೆಯಲ್ಲಿ ವಾಹನ ನಿಷೇಧದ ಕುರಿತು ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ರಸ್ತೆ ದುರಸ್ತಿ ಪೂರ್ಣಗೊಂಡ ಬಳಿಕ ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆ ಎಂಬುದನ್ನು ದೃಢಪಡಿಸುವ ರಸ್ತೆ ಸುರಕ್ಷತಾ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಸಂಚಾರ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ದುರಸ್ತಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಯಾವುದೇ ಅಪಘಾತ ಸಂಭವಿಸದಂತೆ ನಿರಂತರ ನಿಗಾ ವಹಿಸುವಂತೆಯೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share