Friday, October 23, 2026
HomeLocal Newsಮಾರ್ಪಡಿಸಿದ ಸೈಲೆನ್ಸರ್ ಬಳಕೆ: 31 ಪ್ರಕರಣ ದಾಖಲು

ಮಾರ್ಪಡಿಸಿದ ಸೈಲೆನ್ಸರ್ ಬಳಕೆ: 31 ಪ್ರಕರಣ ದಾಖಲು

ಕಾರವಾರ: ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹಾಗೂ ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ದೋಷಪೂರಿತ ಮತ್ತು ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ಕಾರವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ದೋಷಪೂರಿತ ಸೈಲೆನ್ಸರ್ ಬಳಕೆಗೆ ಸಂಬಂಧಿಸಿದ 7 ಪ್ರಕರಣಗಳು ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 31 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಾಹನ ಸವಾರರು ಕಾನೂನುಬಾಹಿರವಾಗಿ ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಅಳವಡಿಸಿಕೊಳ್ಳದೆ, ವಾಹನಗಳ ಮೂಲ ವಿನ್ಯಾಸ ಹಾಗೂ ನಿಗದಿತ ಶಬ್ದಮಟ್ಟದ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವ ರೀತಿಯಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share