Thursday, October 22, 2026
HomeLocal Newsಸಂಕನೂರರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ: ಪ್ರಹ್ಲಾದ್ ಜೋಶಿ

ಸಂಕನೂರರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ: ಪ್ರಹ್ಲಾದ್ ಜೋಶಿ

ಕಾರವಾರ: ವಿಧಾನ ಪರಿಷತ್ ಎಂದರೆ ಚಿಂತಕರ ಚಾವಡಿ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.

ಕಾರವಾರದ ಸದಾನಂದ ಪ್ಯಾಲೇಸ್ ಸಭಾಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಪದವೀಧರ ಮತದಾರರಲ್ಲಿ ಮನವಿ ಮಾಡಿದರು.

ಉತ್ತರ ಕನ್ನಡ ಜಿಲ್ಲೆಯ ಹಸಿರು ವಾತಾವರಣವನ್ನು ಕಂಡು ಹೆಮ್ಮೆಯಾಗುತ್ತದೆ ಎಂದು ಮಾತು ಆರಂಭಿಸಿದ ಜೋಶಿ, ವಿಧಾನ ಪರಿಷತ್‌ನಲ್ಲಿ ಜನರ ಸಮಸ್ಯೆಗಳ ಕುರಿತು ಚರ್ಚಿಸಲು ಅನುಭವ ಮತ್ತು ಅಧ್ಯಯನ ಹೊಂದಿರುವ ಪ್ರತಿನಿಧಿಗಳ ಅಗತ್ಯವಿದ್ದು, ಸಂಕನೂರ ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.

ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಸಂಕನೂರ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಿಂಗರಾಜ ಪಾಟೀಲ್, ಪಕ್ಷದ ಪ್ರಮುಖರಾದ ಆರ್.ಡಿ. ಹೆಗಡೆ, ವೆಂಕಟೇಶ ನಾಯಕ, ಎಂ.ಜಿ. ಭಟ್, ಸೂರಜ್ ಸೋನಿ, ಸುನಿಲ್ ಸೋನಿ, ಹರಿಪ್ರಕಾಶ ಕೋಣೆಮನೆ, ರಾಜೇಂದ್ರ ನಾಯ್ಕ, ಸಂಜಯ ಸಾಲುಂಕೆ, ಗುರುಪ್ರಸಾದ್ ಹೆಗಡೆ ಹರ್ತೆಬೈಲ್, ಶಿವಾಜಿ ನರಸಾನಿ, ಪ್ರಶಾಂತ್ ನಾಯ್ಕ, ಸುಭಾಷ್ ಗುನಗಿ, ನಾಗೇಶ ಕುರ್ಡೇಕರ್, ಸಂಜಯ ನಾಯ್ಕ, ರವಿರಾಜ್ ಅಂಕೋಲೆಕರ, ಜೆಡಿಎಸ್ ಪದಾಧಿಕಾರಿಗಳು, ವಿವಿಧ ಘಟಕಗಳ ನಾಯಕರು, ಕಾರ್ಯಕರ್ತರು ಹಾಗೂ ಮತದಾರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share