Sunday, September 6, 2026
Join WhatsApp Group
HomeLocal Newsನದಿ ತಿರುವು ಯೋಜನೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ

ನದಿ ತಿರುವು ಯೋಜನೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ

ಕಾರವಾರ: ಪ್ರಸ್ತಾಪಿತ ಬೇಡ್ತಿ–ಹಿರೇವಡ್ಡಟ್ಟಿ (ಬೇಡ್ತಿ–ವರದಾ) ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ರೈತರು, ಪರಿಸರ ಹೋರಾಟಗಾರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಪಾಲ್ಗೊಂಡರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಸಲ್ಲಿಸಲಾಯಿತು.

ನದಿ ಜೋಡಣೆ ಯೋಜನೆಗಳಿಂದ ಪಶ್ಚಿಮಘಟ್ಟದ ಅರಣ್ಯ, ಜೀವವೈವಿಧ್ಯ ಹಾಗೂ ನದಿಯ ಪರಿಸರ ವ್ಯವಸ್ಥೆಗೆ ಹಾನಿಯಾಗುವ ಸಾಧ್ಯತೆಯಿದೆ. ಭೂ ಅಗೆತ, ಅರಣ್ಯ ನಾಶ, ಭೂಕುಸಿತ ಹಾಗೂ ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗುವ ಆತಂಕವಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ನದಿಗಳ ಸಿಹಿನೀರಿನ ಹರಿವು ಕಡಿಮೆಯಾದರೆ ಕರಾವಳಿ ಭಾಗದಲ್ಲಿ ಉಪ್ಪುನೀರು ನುಗ್ಗುವ ಸಾಧ್ಯತೆಯಿದ್ದು, ಕೃಷಿ, ಕುಡಿಯುವ ನೀರು ಹಾಗೂ ಮೀನುಗಾರಿಕೆ ಮೇಲೂ ಪರಿಣಾಮ ಬೀರಬಹುದು ಎಂದು ಸಮಿತಿ ತಿಳಿಸಿದೆ.

ಯೋಜನೆಗಳ ವಿರುದ್ಧ ಕಳೆದ 25 ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಇತ್ತೀಚೆಗೆ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೇಡ್ತಿ–ಹಿರೇವಡ್ಡಟ್ಟಿ ಯೋಜನೆಯ DPR ತಯಾರಿಸುವ ಆದೇಶ ರದ್ದುಪಡಿಸಿ, ಎಲ್ಲ ಸಮೀಕ್ಷಾ ಕಾರ್ಯಗಳನ್ನು ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share