Monday, September 7, 2026
Join WhatsApp Group
HomeLocal Newsಕಿರಾಣಿ ಅಂಗಡಿಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಹಾನಿ

ಕಿರಾಣಿ ಅಂಗಡಿಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಹಾನಿ

ಕಾರವಾರ: ತಾಲೂಕಿನ ಶಿರವಾಡ ಜಾಂಬಾ ಕ್ರಾಸ್ ಸಮೀಪದ ಕಿರಾಣಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಸೀಮಾ ರಾಮದಾಸ್ ಶೇಟ್ ಅವರಿಗೆ ಸೇರಿದ “ಸಾಗರ್ ಜನರಲ್ ಸ್ಟೋರ್” ಅಂಗಡಿಯಲ್ಲಿ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಿಕ್ ಮೀಟರ್ ಬೋರ್ಡ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಬಳಿಕ ಸಂಪೂರ್ಣ ಅಂಗಡಿಗೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ.

ಘಟನೆ ನಡುರಾತ್ರಿ ಸಂಭವಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಅಂಗಡಿಯಲ್ಲಿದ್ದ ಕಿರಾಣಿ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದರು.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಮಹಾಬಲೇಶ್ವರ್ ಎನ್. ಗೌಡ ಹಾಗೂ ಸಿಬ್ಬಂದಿಗಳಾದ ಸಪ್ನಿಲ್ ಪೆಡ್ನೇಕರ್, ರವಿರಾಜ್ ಭೂತೆ, ಟೋನಿ ಬಾರಬೋಜ, ದೀಪಕ್ ಅಂಕೋಲೇಕರ್ ಮತ್ತು ಚಂದನ್ ದಳವಾಯಿ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share