Friday, July 24, 2026
Join WhatsApp Group
HomeLocal Newsಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳ ಸಾಧನೆ

ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳ ಸಾಧನೆ

ಕಾರವಾರ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ. 7ರಂದು ನಡೆದ 1st Karnataka Open Relay Competition ನಲ್ಲಿ ಕಾರವಾರ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.

 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಸಾವಿತ್ರಿ ಮಿರಾಶಿ, ಭೂಮಿಕಾ ಮೋರೆ, ಚಾಮುಂಡೇಶ್ವರಿ ಮಿರಾಶಿ, ನಯನಾ ಚೆನ್ನಯ್ಯ ಅವರನ್ನು ಒಳಗೊಂಡ ತಂಡ 4*100 ಮೀ ರಿಲೇಯಲ್ಲಿ ಪ್ರಥಮ ಸ್ಥಾನ ಹಾಗೂ 16 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರೀಯಾ ಪವಾರ, ಕಾಂಚನಾ ಕವರೇಕರ, ಕೋಮಲಾ ಟೆಕ್ಕೇಕರ ಅವರನ್ನು ಒಳಗೊಂಡ ತಂಡ 4*100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಮತ್ತು Medley Relay ಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಈ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ ಅಭಿನಂದನೆ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share