Friday, July 24, 2026
Join WhatsApp Group
HomeUncategorizedಕಾರವಾರದಿಂದ ಕೈಗಾವರೆಗೆ ಚತುಷ್ಪಥ ನಿರ್ಮಾಣ

ಕಾರವಾರದಿಂದ ಕೈಗಾವರೆಗೆ ಚತುಷ್ಪಥ ನಿರ್ಮಾಣ

ಕಾರವಾರ: ಕಾರವಾರದಿಂದ ಕೈಗಾವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಕುರಿತಂತೆ ಯೋಜನೆ ಸಿದ್ಧಪಡಿಸಿ ಕಾರ್ಯಗತಗೊಳಿಸುವಂತೆ ಲೋಕೋಪಯೋಗಿ, ನಗರಸಭೆ, ಕೈಗಾದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ನಿರ್ದೇಶನ ನೀಡಿದರು.

ಅವರು ಗುರುವಾರ ಎನ್.ಪಿ.ಸಿ.ಐ.ಎಲ್ ಕೈಗಾದ ಸಿ.ಎಸ್.ಆರ್ ಪ್ರಾಯೋಜಕತ್ವದ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಧೀನ ಸಂಸ್ಥೆಗಳಿಗೆ ಅಂಬುಲೆನ್ಸ್ ಹಾಗೂ ಇತರೆ ವಾಹನಗಳ ಲೋಕಾರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರವಾರ ಕ್ಷೇತ್ರದಲ್ಲಿ ರಸ್ತೆಗಳು ಅತ್ಯಂತ ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೆ ಅನೇಕ ಸಮಸ್ಯೆಗಳಿವೆ. ಈಗಾಗಲೇ ಕೈಗಾ ರಸ್ತೆ ಅಗಲೀಕರಣಕ್ಕೆ ರೂ.22.5 ಕೋಟಿ ಹಣ ನೀಡಲಾಗಿದೆ. ಜೊತೆಗೆ ನಗರಸಭೆ ಸಹಕಾರದಿಂದ ನಗರದ ರಸ್ತೆಗಳು ಹಾಗೂ ರೈಲ್ವೆ ನಿಲ್ದಾಣದವರೆಗೂ ಈಗಾಗಲೇ ಉತ್ತಮ ರಸ್ತೆ ನಿರ್ಮಾಣವಾಗಿದೆ.

ಲೋಕೋಪಯೋಗಿ, ನಗರಸಭೆ ಕೈಗಾದ ವತಿಯಿಂದ ಜಂಟಿಯಾಗಿ ಕಾರವಾರದಿಂದ ಕೈಗಾವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡುವುದರಿಂದ ಎನ್.ಪಿ.ಸಿ.ಐ.ಎಲ್ಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ತಮ್ಮ ಅವಧಿಯಲ್ಲಿ ಕಾರವಾರ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಎನ್.ಪಿ.ಸಿ.ಐ.ಎಲ್ ಕೈಗಾದ ಸ್ಥಳ ನಿರ್ದೇಶಕ ವಿನೋದ್ ಕುಮಾರ್ ಮಾತನಾಡಿ, ಪ್ರತೀ ವರ್ಷ 10 ಕೋಟಿ ಗೂ ಅಧಿಕ ಮೊತ್ತವನ್ನು ಸಿಎಸ್‌ಆರ್ ನಿಧಿಯಿಂದ ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ವೆಚ್ಚ ಮಾಡುತ್ತಿದೆ.

 ಕೈಗಾ-ಇಳಕಲ್ ರಸ್ತೆಯ ಕೆರವಾಡಿಯಿಂದ ಕೈಗಾ ಕ್ರಾಸ್ವರೆಗಿನ ರಸ್ತೆ ಅಗಲೀಕರಣಕ್ಕೆ ರೂ. 24.5 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಮತ್ತು ಶಾಸಕರು ಶಿಫಾರಸಿನಂತೆ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳಲಾಗುವುದು ಎಂದರು.

 ಇದೇ ಸಂದರ್ಭದಲ್ಲಿ ಅಂಕೋಲಾದಲ್ಲಿ ಮಂಗನಕಾಯಿಲೆ ನಿಯಂತ್ರಣ ಕಾರ್ಯಕ್ರಮಗಳಿಗೆ ಒಂದು ವಾಹನ ನೀಡುವಂತೆ ಕೈಗಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಹೆಚ್‌ಓ ಡಾ. ಶಂಕರ್ ರಾವ್, ಆರ್.ಸಿ.ಹೆಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ರಮೇಶ್ ರಾವ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರ್ಷ , ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ಎನ್.ಪಿ.ಸಿ.ಐ.ಎಲ್ ಕೈಗಾದ ಹೆಚ್ಚುವರಿ ಚೀಫ್ ಇಂಜಿನಿಯರ್ ಹಾಗೂ ಸಿಎಸ್‌ಆರ್ ನಿಧಿ ಅಧಿಕಾರಿ ತಿಪ್ಪೇಸ್ವಾಮಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share