Friday, July 24, 2026
Join WhatsApp Group
HomeLocal Newsಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನಶೈಲಿಯೂ ಕಾರಣ

ಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನಶೈಲಿಯೂ ಕಾರಣ

ಶಿರಸಿ: ಉತ್ತರ ಕನ್ನಡ  ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಕೆಗೊಂಡಿದ್ದು, ಅವುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಅವರು ಶನಿವಾರ ಕ್ಯಾದಗಿಯಲ್ಲಿ 9 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

 ಉತ್ತಮ ವೈದ್ಯರು ಮತ್ತು ಸಿಬ್ಬಂದಿ ವರ್ಗ ಇದ್ದಾಗ ಮಾತ್ರ  ಗುಣಮಟ್ಟದ  ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯ. ಖಾಯಿಲೆಗಳ ಹೆಚ್ಚಳಕ್ಕೆ ನಮ್ಮ ಜೀವನ ಶೈಲಿಯೂ ಮುಖ್ಯ ಕಾರಣವಾಗಿದ್ದು, ಹೆಚ್ಚಿನ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಶಿರಸಿಯ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಶಾಸಕ ಭೀಮಣ್ಣ ನಾಯ್ಕ ಮಾತನಾಡಿ,  ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಕ್ಯಾದಗಿಯಲ್ಲಿ ಹಲವಾರು ವರ್ಷಗಳ ಬೇಡಿಕೆಯಾದ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ. ಈ ಭಾಗದಲ್ಲಿರುವ ಮಂಗನ ಕಾಯಿಲೆ ತಪಾಸಣೆಗೋಸ್ಕರ 4೦ ಲಕ್ಷ ರೂ ವೆಚ್ಚದಲ್ಲಿ ಶಿರಸಿಯಲ್ಲಿ ತಪಾಸಣಾ ಕೇಂದ್ರ ತೆರೆಯಲು ಆರೋಗ್ಯ ಸಚಿವರು ಸಹಕರಿಸಿದ್ದಾರೆ ಎಂದರು. 

ವೇದಿಕೆಯಲ್ಲಿ ಆರೋಗ್ಯ ಇಲಾಖೆಯ ಬೆಳಗಾವಿ ವಿಭಾಗದ ಸಹ ನಿರ್ದೇಶಕಿ ಡಾ.ಪುಷ್ಪಾ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ರಾವ್, ತಹಸೀಲ್ದಾರ ಎಂ.ಆರ್. ಕುಲಕರ್ಣಿ, ತಾ.ಪಂ ಇಓ ದೇವರಾಜ ಹಿತ್ತಲಕೊಪ್ಪ, ಕ್ಯಾದಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಸುಮಾ ಇದ್ದರು. 

ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share