Friday, October 23, 2026
HomeLocal Newsಶ್ರೀಕ್ಷೇತ್ರ ಕವಡಿಕೆರೆ ದೇವಾಲಯದ ಮಹಾದ್ವಾರ ನಿರ್ಮಾಣಕ್ಕೆ ಚಾಲನೆ

ಶ್ರೀಕ್ಷೇತ್ರ ಕವಡಿಕೆರೆ ದೇವಾಲಯದ ಮಹಾದ್ವಾರ ನಿರ್ಮಾಣಕ್ಕೆ ಚಾಲನೆ

ಯಲ್ಲಾಪುರ: ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವ ಹೊಂದಿರುವ ಶ್ರೀ ಕ್ಷೇತ್ರ ಕವಡಿಕೆರೆ ದೇವಸ್ಥಾನದ ಮಹಾದ್ವಾರ ನಿರ್ಮಾಣ ಕಾರ್ಯಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.

ದೇವಸ್ಥಾನದ ಪುರೋಹಿತ ಮಹಾಬಲೇಶ್ವರ ಭಟ್ಟ ಕಿರಕುಂಬತ್ತಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಕಟ್ಟಡ ಸಮಿತಿಯ ಉಪಾಧ್ಯಕ್ಷ ಗೋಪಾಲಕೃಷ್ಣ ವೆಂ.ಭಟ್ಟ ಮಾವಿನಕುಡಿ ದಂಪತಿಗಳು ಪೂಜಾ ಕೈಂಕರ್ಯದ ಯಜಮಾನತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಎಂ.ಭಟ್ಟ (ಎಂ.ಕೆ.ಬಿ.), ಉಪಾಧ್ಯಕ್ಷ ನಾಗರಾಜ ಕವಡಿಕೇರಿ, ಕಾರ್ಯದರ್ಶಿ ರಾಮಕೃಷ್ಣ ಕವಡಿಕೇರಿ, ಸಹಕಾರ್ಯದರ್ಶಿ ರಾಮಚಂದ್ರ ಭಟ್ಟ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

ಮಹಾದ್ವಾರ ನಿರ್ಮಾಣವು ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಸೇರ್ಪಡೆಯಾಗಲಿದ್ದು, ದೇವಸ್ಥಾನದ ಸಾಂಪ್ರದಾಯಿಕ ಮೆರುಗನ್ನು ಹೆಚ್ಚಿಸುವುದರೊಂದಿಗೆ ಭಕ್ತರ ಬಹುದಿನಗಳ ನಿರೀಕ್ಷೆಗೂ ಹೊಸ ರೂಪ ನೀಡಲಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share