Thursday, October 22, 2026
HomeLocal Newsಕಬ್ಬು ಬೆಳೆಗಾರರ ಆಕ್ರೋಶಕ್ಕೆ ಸ್ತಬ್ಧವಾದ ರಾಷ್ಟ್ರೀಯ ಹೆದ್ದಾರಿ

ಕಬ್ಬು ಬೆಳೆಗಾರರ ಆಕ್ರೋಶಕ್ಕೆ ಸ್ತಬ್ಧವಾದ ರಾಷ್ಟ್ರೀಯ ಹೆದ್ದಾರಿ

ಯಲ್ಲಾಪುರ: ಕಬ್ಬಿಗೆ ಪ್ರತಿ ಟನ್‌ಗೆ ರೂ. 6,000 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಕಿರವತ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಕಬ್ಬು ಬೆಳೆಯಲು ಅಗತ್ಯವಿರುವ ಗೊಬ್ಬರ, ಬೀಜ, ಕೂಲಿ ಕಾರ್ಮಿಕರ ವೇತನ, ನೀರಾವರಿ ಹಾಗೂ ಸಾಗಣೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೆ, ವರ್ಷಪೂರ್ತಿ ಶ್ರಮಪಟ್ಟು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ರೂ. 6,000 ದರ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ದೇಶದ ಜನರ ಹಸಿವು ನೀಗಿಸುವ ರೈತರು ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲಕ್ಕಾಗಿ ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರ ಸಂಕಷ್ಟದ ಬಗ್ಗೆ ಆಡಳಿತಾರೂಢ ಸರ್ಕಾರಗಳು ಗಮನ ಹರಿಸಬೇಕು. ಕಾರ್ಖಾನೆ ಮಾಲೀಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗುತ್ತಿದ್ದರೂ, ಕಬ್ಬು ಬೆಳೆಯುವ ರೈತರು ನಷ್ಟ ಅನುಭವಿಸುತ್ತಿರುವುದೇಕೆ? ರೈತರ ಹಿತ ಕಾಪಾಡಲು ಕಬ್ಬಿಗೆ ರೂ. 6,000 ದರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾನಿರತ ರೈತರು ತಮ್ಮ ಮನವಿ ಸ್ವೀಕರಿಸಲು ತಾಲೂಕು ದಂಡಾಧಿಕಾರಿಗಳು ಬಂದರೆ ಮನವಿ ನೀಡುವುದಿಲ್ಲ. ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಹೆದ್ದಾರಿ ತಡೆಯಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share