Monday, September 7, 2026
Join WhatsApp Group
HomeLocal Newsಕಿರವತ್ತಿ ಟು ಬೈಲಂದೂರು; ಮೊಳಗಿತು ತಿರಂಗಾ ಜೈಕಾರ

ಕಿರವತ್ತಿ ಟು ಬೈಲಂದೂರು; ಮೊಳಗಿತು ತಿರಂಗಾ ಜೈಕಾರ

ಯಲ್ಲಾಪುರ: ದೇಶಭಕ್ತಿಯ ಘೋಷಣೆಗಳ ನಡುವೆ ಕಿರವತ್ತಿಯಿಂದ ಬೈಲಂದೂರಿನವರೆಗೆ ನಡೆದ ಬೈಕ್ ‍ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡು ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮತ್ತಷ್ಟು ಉತ್ಸಾಹ ತುಂಬಿದರು.

‘ಹರ್ ಘರ್ ತಿರಂಗಾ’ ಅಭಿಯಾನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಬೈಕ್ ‍ರ್ಯಾಲಿ ಕಿರವತ್ತಿಯಿಂದ ಆರಂಭಗೊಂಡು ಬೈಲಂದೂರಿನವರೆಗೆ ಸಾಗಿತು. ಮಾರ್ಗದುದ್ದಕ್ಕೂ ಭಾರತ್ ಮಾತಾ ಕೀ ಜೈ’ ಘೋಷಣೆ ಮೊಳಗಿತು. ಪಕ್ಷದ ಕಾರ್ಯಕರ್ತರೊಂದಿಗೆ ಸಾರ್ವಜನಿಕರೂ ‍ರ್ಯಾಲಿಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಬೈಲಂದೂರಿಗೆ ತಲುಪಿದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಗೌರವ ಸಲ್ಲಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರೊಂದಿಗೆ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸುವ ಕುರಿತು ಸಂಕಲ್ಪ ಮಾಡಲಾಯಿತು.

ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ದೇಶದ ಗೌರವ ಹಾಗೂ ಸ್ವಾತಂತ್ರ್ಯದ ಸಂಭ್ರಮವನ್ನು ಸಾರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಬ್ರಾಯ ವಾಳ್ಕೆ, ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಸಾಮಾಜಿಕ ಮುಖಂಡ ಬಾಲು ನಾಯಕ, ಮಂಡಳ ಪ್ರಧಾನ ಕಾರ್ಯದರ್ಶಿ ರವಿ ಕೈಟ್ಕರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗಣೇಶ ಪಾಟಣಕರ, ಮಂಡಳ ಕಾರ್ಯದರ್ಶಿ ಮಹೇಶ ದೇಸಾಯಿ, ಜಿಲ್ಲಾ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಪರಶುರಾಮ ತಿರಕಪ್ಪನವರ, ಕಿರವತ್ತಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ದೊಂಡು ಪಾಟೀಲ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ, ಕಾರ್ಯದರ್ಶಿ ಸುರೇಶ ಮುಂಡಗಿಕರ, ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಅರ್ಜುನ ಬೆಂಗೇರಿ, ಯುವಮೋರ್ಚಾ ಅಧ್ಯಕ್ಷ ರಜತ ಬದ್ದಿ, ಕಾರ್ಯದರ್ಶಿ ಪ್ರಭು ಚುಂಚಖಂಡಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ವಿಠ್ಠು ಪಾಂಡ್ರಮೀಸೆ, ಕಾರ್ಯದರ್ಶಿ ರವಿ ದೇವಾಡಿಗ, ರೈತಮೋರ್ಚಾ ಕಾರ್ಯದರ್ಶಿ ಗಾಂಧೀ ಸೋಮಾಪುರಕರ, ಯುವಮೋರ್ಚಾ ಉಪಾಧ್ಯಕ್ಷ ವಿಠ್ಠು ಶೆಳಕೆ, ಶಕ್ತಿ ಕೇಂದ್ರ ಪ್ರಮುಖರಾದ ಹೀರು ಶಿಂದೆ, ಸುಭಾಷ್ ಶೇಷಗಿರಿ, ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಮಂಜು ಕೊರವರ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share