Thursday, July 23, 2026
Join WhatsApp Group
HomeEducationನಾಳೆಯೇ ಬರಲಿದೆ SSLC ಫಲಿತಾಂಶ | ಆನ್‌ಲೈನ್‌ನಲ್ಲಿ ಅಂಕಪಟ್ಟಿ ಡೌನ್‌ಲೋಡ್‌ ಮಾಡುವುದು ಹೇಗೆ?

ನಾಳೆಯೇ ಬರಲಿದೆ SSLC ಫಲಿತಾಂಶ | ಆನ್‌ಲೈನ್‌ನಲ್ಲಿ ಅಂಕಪಟ್ಟಿ ಡೌನ್‌ಲೋಡ್‌ ಮಾಡುವುದು ಹೇಗೆ?

SSLC ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿ, “ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಅದರಂತೆ ಈ ವರ್ಷ ಅಂಕಗಳನ್ನು ನೀಡಲಾಗುತ್ತದೆ. ಮುಂದಿನ ವರ್ಷ ಗ್ರೇಡ್ ಪದ್ಧತಿ ಕುರಿತು ಸರ್ಕಾರ ಮರುಪರಿಶೀಲನೆ ನಡೆಸಲಿದೆ” ಎಂದು ಸ್ಪಷ್ಟಪಡಿಸಿದರು.

ಈ ನಿರ್ಧಾರದಿಂದ ವಿದ್ಯಾರ್ಥಿಗಳ ಮೌಲ್ಯಮಾಪನದಲ್ಲಿ ಸ್ಪಷ್ಟತೆ ಬರಲಿದ್ದು, ಪೋಷಕರು ಮತ್ತು ಶಿಕ್ಷಕರಲ್ಲಿಯೂ ನಿರೀಕ್ಷೆ ಮೂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್‌ 23ರಂದು 10ನೇ ತರಗತಿ ಬೋರ್ಡ್ ಪರೀಕ್ಷೆ 2026 ಫಲಿತಾಂಶ ಬಿಡುಗಡೆ ಮಾಡಲಿದೆ. ಅಂಕಪಟ್ಟಿ ಡೌನ್‌ಲೋಡ್‌ ಮಾಡಲು ಈ ವಿಧಾನ ಅನುಸರಿಸಿ.

1. ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಕೊಡಿ. 

2. ಪರದೆ ಮೇಲೆ ಕಾಣುವ SSLC Result 2026 ಆಯ್ಕೆ ಮಾಡಿ.

3. ಬಳಿಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಮಾಹಿತಿ ನಮೂದಿಸಿ.

4. ವಿವರ ಹಾಕಿದ ಬಳಿಕ ಸಲ್ಲಿಸು/ಸಬ್ಮಿಟ್ ಬಟನ್ ಒತ್ತಿ.

5. ಪರದೆ ಮೇಲೆ SSLC 2026 ಅಂಕಪಟ್ಟಿ ಕಾಣಿಸುತ್ತದೆ.

6. ಅದು ನಿಮ್ಮದೇ ಅಂಕಪಟ್ಟಿಯೇ ಎಂದು ಪರಿಶೀಲಿಸಿಕೊಂಡು ಡೌನ್‌ಲೋಡ್ ಮಾಡಿಕೊಳ್ಳಬಹುದು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share