Monday, September 7, 2026
Join WhatsApp Group
HomeLocal Newsಉಚಿತ ತರಬೇತಿ ಪಡೆಯಿರಿ, ನೀವೂ ಬ್ಯುಟಿಷಿಯನ್‌ ಆಗಿ

ಉಚಿತ ತರಬೇತಿ ಪಡೆಯಿರಿ, ನೀವೂ ಬ್ಯುಟಿಷಿಯನ್‌ ಆಗಿ

ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕುಮಟಾದಲ್ಲಿ ಮೇ. 14ರಿಂದ ಜೂನ್ 17ರವರೆಗೆ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ-ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 50 ವರ್ಷ ಹಾಗೂ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.

ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ-ಕುಮಟಾ-581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-9449860007, 9538281989, 9916783825, 8880444612, 9620962004ನ್ನು ಸಂಪರ್ಕಿಸುವಂತೆ ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share