ಕುಮಟಾ: ಹೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆ.30ರಂದು ಕುಮಟಾ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುಮಟಾ ಉಪವಿಭಾಗದ 33/11 ಕೆ.ವಿ. ಮಿರ್ಜಾನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಸೆ.30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿರ್ಜಾನ್ ಖಂಡಗಾರ, ನಾಗೂರ, ಬರ್ಗಿ, ಉಪ್ಪಿನಪಟ್ಟಣ, ಯಲವಳ್ಳಿ, ಕೋಡ್ಕಣಿ ಹಾಗೂ ದೀವಗಿ ಮಾರ್ಗದ ವ್ಯಾಪ್ತಿಯ ಎಲ್ಲಾ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಹೊನ್ನಾವರ ತಾಲೂಕಿನ ಗ್ರಾಮೀಣ ಶಾಖೆಯ ಸಾಲ್ಕೋಡ, ಕಡ್ಲೆ, ಸುಬ್ರಹ್ಮಣ್ಯ ಹಾಗೂ ಹಡಿನಬಾಳ ಫೀಡರ್ಗಳ 11 ಕೆ.ವಿ. ಮಾರ್ಗದ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಸೆ.30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಫೀಡರ್ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವುದರಿಂದ ಗ್ರಾಹಕರು ಸಹಕರಿಸುವಂತೆ ಕುಮಟಾ ಹಾಗೂ ಹೊನ್ನಾವರ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


