Friday, October 23, 2026
HomeLocal Newsಕುಮಟಾ | ಸೆ.26ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ಕುಮಟಾ | ಸೆ.26ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ಕುಮಟಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ 11 ಕೆ.ವಿ. ಮಾರ್ಗ ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಸೆ.26ರಂದು ಕುಮಟಾ ತಾಲೂಕಿನ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಮಟಾ ಹೆಸ್ಕಾಂ ಉಪವಿಭಾಗದ ನಗರ ಶಾಖೆಯ 11 ಕೆ.ವಿ. ಚಿತ್ರಗಿ ಮಾರ್ಗದ ಅಳ್ವೆಕೊಡಿ ಭಾಗದಲ್ಲಿ ಹಾಗೂ ಗ್ರಾಮೀಣ ಶಾಖೆಯ 11 ಕೆ.ವಿ. ಧಾರೇಶ್ವರ ಮಾರ್ಗದ ಎಲ್ಲ ಭಾಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಅವಧಿಯಲ್ಲಿ ಗ್ರಾಹಕರು ಸಹಕರಿಸುವಂತೆ ಕುಮಟಾ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share