Friday, October 23, 2026
HomeLocal Newsಬೈಕ್ ರಿಪೇರಿ ಕಲಿಯಬೇಕಾ, ಇಲ್ಲಿದೆ ಉಚಿತ ತರಬೇತಿ

ಬೈಕ್ ರಿಪೇರಿ ಕಲಿಯಬೇಕಾ, ಇಲ್ಲಿದೆ ಉಚಿತ ತರಬೇತಿ

ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಕುಮಟಾದಲ್ಲಿ ಅ.1ರಿಂದ 30ರವರೆಗೆ ಎಲ್ಲಾ ಕಂಪನಿಗಳ ದ್ವಿಚಕ್ರ ವಾಹನಗಳ ದುರಸ್ತಿ ಕುರಿತು ಉಚಿತ ತರಬೇತಿ ಆಯೋಜಿಸಲಾಗಿದೆ.

ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಊಟ ಮತ್ತು ವಸತಿ ಸಹಿತ ತರಬೇತಿ ಸಂಪೂರ್ಣ ಉಚಿತವಾಗಿರಲಿದೆ.

ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. 18ರಿಂದ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿಗೆ ಅನುಗುಣವಾದ ಕನಿಷ್ಠ ಜ್ಞಾನ ಹೊಂದಿರುವುದು ಅಗತ್ಯವಾಗಿದೆ.

ಆಸಕ್ತರು ತರಬೇತಿಗೆ ಬರುವಾಗ ನಾಲ್ಕು ಪಾಸ್‌ಪೋರ್ಟ್‌ ಅಳತೆಯ ಫೋಟೋ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್‌ಗಳ ತಲಾ ಒಂದು ಜೆರಾಕ್ಸ್ ಪ್ರತಿಯನ್ನು ತರಬೇಕು.

ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ–581343, ಉತ್ತರ ಕನ್ನಡ ಜಿಲ್ಲೆ ಇವರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 08386-220530, 9449860007, 9538281989, 9916783825, 8880444612, 9620962004 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವ ಉದ್ಯೋಗ ಕೈಗೊಳ್ಳುವಂತೆ ಸಂಸ್ಥೆ ಕೋರಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share