Friday, July 24, 2026
Join WhatsApp Group
HomeLocal Newsಕಾನೂನು ಅರಿವು

ಕಾನೂನು ಅರಿವು

ಫೆ.2ರಿಂದ ವಿಶೇಷ ಬಾನುಲಿ ಸರಣಿ

ಕಾರವಾರ: ಜನಸಾಮಾನ್ಯರಲ್ಲಿ ಕಾನೂನಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಕಾಶವಾಣಿ ಕಾರವಾರ ಕೇಂದ್ರವು ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ‘ಕಾನೂನಿನ ಅರಿವುʼ ಎಂಬ ವಿಶೇಷ ಸರಣಿ ಕಾರ್ಯಕ್ರಮವನ್ನು ಬಿತ್ತರಿಸಲಿದೆ.

ಇದೇ ಫೆಬ್ರವರಿ 9ರಿಂದ ಆರಂಭಗೊಂಡು ಪ್ರತಿ ದಿನ ಸಂಜೆ 7.20ರಿಂದ 7.35ರವರೆಗೆ ಪ್ರಸಾರಗೊಳ್ಳುವ ಈ ಸರಣಿ ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಉದ್ದೇಶ, ಅಧಿನಿಯಮ, ದೇಶಕ್ಕಾಗಿ ಮಧ್ಯಸ್ಥಿಕೆ ಅಭಿಯಾನ, ರಾಷ್ಟ್ರೀಯ ಲೋಕ್ ಅದಾಲತ್, ಬಾಲ್ಯ ವಿವಾಹ ನಿಷೇಧ ಕಾನೂನು, ಪೋಕ್ಸೋ ಕಾಯ್ದೆ, ವರದಕ್ಷಿಣೆ ಸಂಬಂಧಿತ ಸಮಸ್ಯೆಗಳು, ಕಾರ್ಯಕ್ಷೇತ್ರದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವುದು ಹೀಗೆ ಹಲವಾರು ವಿಷಯಗಳ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಕಾನೂನಿನ ಅರಿವಿಲ್ಲ ಎಂಬ ಕಾರಣಕ್ಕೆ ಅಪರಾಧವೆಸಗಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುವಂತಿಲ್ಲ ಹಾಗೂ ಮನೆ ಮನೆಗೂ ಕಾನೂನಿನ ಬಗ್ಗೆ ಅರಿವನ್ನು ಮೂಡಿಸುವ ಉದ್ದೇಶದಿಂದ ‘ದೇಶಕ್ಕಾಗಿ ಮಧ್ಯಸ್ಥಿಕೆ ಅಭಿಯಾನ (Mediation for the Nation)ದ ಭಾಗವಾಗಿ ಪ್ರಸಾರಗೊಳ್ಳುತ್ತಿರುವ ಪ್ರಸಕ್ತ ಸರಣಿಯಲ್ಲಿ ಕೇಳುಗರು ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಆಕಾಶವಾಣಿ ಕಾರವಾರ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಟಿ.ಎಸ್. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share