Friday, July 24, 2026
Join WhatsApp Group
HomeLocal Newsಕೆಳಹಂತದಲ್ಲಿ ವಿಮಾನ ಹಾರಿದರೆ ಗಾಬರಿ ಬೇಡ!

ಕೆಳಹಂತದಲ್ಲಿ ವಿಮಾನ ಹಾರಿದರೆ ಗಾಬರಿ ಬೇಡ!

ಕಾರವಾರ: ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಸಂಸ್ಥೆ (Geological Survey of India), ಬೆಂಗಳೂರು ವತಿಯಿಂದ National Aero Geophysical Mapping Programme (NAGMP) ಅಡಿಯಲ್ಲಿ ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ವೈಜ್ಞಾನಿಕ ಸರ್ವೇ ಕಾರ್ಯ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸುತ್ತಿವೆ. ಸರ್ವೇ ವೇಳೆ ಸಂಗ್ರಹವಾಗುವ ಮಾಹಿತಿಯನ್ನು ಖನಿಜಾನ್ವೇಷಣೆಯಲ್ಲಿ ತೊಡಗಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕ ಬಳಕೆಗೆ National Geoscience Data Repository (NGDR) ಮೂಲಕ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಆದ್ದರಿಂದ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕೆಳಹಂತದ ವಿಮಾನ ಹಾರಾಟದ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕ ಅಥವಾ ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share